ಪ್ಯಾರಿಸ್: ವಿನೇಶ್ ಫೋಗಟ್ ಅವರ ನಿರಾಶೆಯ ನಡುವೆ ಅಮನ್ ಸೆಹ್ರಾವತ್ ಪದಕದ ಭರವಸೆಯನ್ನು ಮೂಡಿಸಿದ್ದಾರೆ. ಯಾರು ನಿರೀಕ್ಷೆಯೂ ಮಾಡದ ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ ಅಮನ್ ಸೆಹ್ರಾವತ್ ಸೆಮಿ ಫೈನಲ್ಗೆ ಪ್ರವೇಶಿಸಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇಂದು ರಾತ್ರಿ 9.45ಕ್ಕೆ ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಅಮನ್ ಜಪಾನ್ ರೇ ಹಿಗುಚಿ ಸವಾಲು ಎದುರಿಸಲಿದ್ದಾರೆ.
ಒಂದು ವೇಳೆ ಫೈನಲ್ ಪಂದ್ಯದಲ್ಲಿ ಗೆದ್ದರೆ ಅವರು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದು ಸಾಧ್ಯವಾದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತದ ಪರ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎನಿಸಿಕೊಳ್ಳಲಿದ್ದಾರೆ.
Ad