ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ಸ್ಕೂಲ್ ಗೇಮ್ ಫೆಡರೇಷನ್ ಆಫ್ ಇಂಡಿಯಾ ದೆಹಲಿಯಲ್ಲಿ ಆಯೋಜಿಸಿದ 69ನೇ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯ 19ರ ಒಳಗಿನ ವಯೋಮಾನ ವಿಭಾಗದ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರು ಪುತ್ತೂರಿನ ಎಂ ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮೀ ಶೆಣೈ ದಂಪತಿ ಪುತ್ರಿ.