ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್  ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ .

ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್, ಸೌತ್ ಆಫ್ರಿಕಾ, ಶ್ರೀಲಂಕಾ ಹಾಗು ಭಾರತದ ಮಹಿಳಾ ತಂಡಗಳು ಭಾಗವಹಿಸಲಿದೆ. ಇದೀಗ ಕೇವಲ 14 ವಯಸ್ಸಿನ ಈಕೆ U.A.E ಯ ಅಂತಾರಾಷ್ಟ್ರೀಯ ಇಂಡೋರ್ ಕ್ರಿಕೆಟ್ ತಂಡದ ಕಿರಿಯ ಆಟಗಾರ್ತಿಯಾಗಿದ್ದು, ಕರ್ನಾಟಕ ಮೂಲದ ಆಟಗಾರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಸದ್ಯ ದುಬೈ ಜೆ ಸ್ ಸ್ ಪ್ರೈವೇಟ್ ಸ್ಕೂಲ್ನಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ಅಮಿಷ ಆನಂದ್, ದುಬೈಯಲ್ಲಿ ನೆಲೆಸಿರುವ ಕ್ರೀಡಾ ಪ್ರೇಮಿ ಆನಂದ್ ಪಟ್ಟೆ ಮತ್ತು ವಿನುತಾ ಆನಂದ್ ದಂಪತಿಯ ಏಕೈಕ ಮಗಳು.