Bengaluru 21°C
Ad

ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ನಿಧನ

ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಮಾಹಿತಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಲು ಅಮೋಲ್ ಕಾಳೆ ಭಾನುವಾರ ನ್ಯೂಯಾರ್ಕ್‌ಗೆ ತೆರಳಿದ್ದರು.

ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಅಮೋಲ್ ಕಾಳೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಮಾಹಿತಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸಲು ಅಮೋಲ್ ಕಾಳೆ ಭಾನುವಾರ ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ತಮ್ಮ ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸ್ಸಾಗುವ ವೇಳೆ ಅವರಿಗೆ ಹೃದಯ ಸ್ತಂಭನವಾಗಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಸಂದೀಪ್ ಪಾಟೀಲ್ ನಂತರ ಅಮೋಲ್ ಕಾಳೆ ಎಂಸಿಎ ಅಧ್ಯಕ್ಷರಾಗಿ ಅಕ್ಟೋಬರ್ 2022 ರಲ್ಲಿ ಆಯ್ಕೆಯಾಗಿದ್ದರು. ಅವರ ಆಡಳಿತಾವಧಿಯಲ್ಲಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತರಲಾಗಿತ್ತು.

Ad
Ad
Nk Channel Final 21 09 2023
Ad