ಚೆನ್ನೈ: 17ನೇ ಆವೃತ್ತಿಯ ಐಪಿಎಲ್ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಕ್ತಾಯ ಹಂತದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಹಾಗದರೆ ಈ ಬಾರಿಯ ವಿಜೇತರಿಗೆ ಸಿಗುವ ಬಹುಮಾನದ ಮೊತ್ತವೆಷ್ಟು ಗೊತ್ತೆ? ಅದರಲ್ಲೂ 4ನೇ ಸ್ಥಾನಿ ಆರ್ಸಿಬಿಗೆ ಸಿಕ್ಕ ಹಣವೆಷ್ಟು ಗೊತ್ತೆ? ಇಲ್ಲಿದೆ ಮಾಹಿತಿ.
ಫೈನಲ್ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್ ಮತ್ತು ಆರ್ಸಿಬಿ ಪ್ಲೇ ಆಫ್ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್ಗೆ(7 ಕೋಟಿ) ಮತ್ತು ಆರ್ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.
ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್ಸಿಬಿ ತಂಡದ ವಿರಾಟ್ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್ ಆಗಿದ್ದಾರೆ. ಇವರ ರನ್ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.
https://x.com/thesportzplanet/status/1789260178589634865