News Karnataka Kannada
Thursday, May 09 2024
ಕ್ರೀಡೆ

ಆ್ಯಶಸ್ ಟೆಸ್ಟ್ ಸರಣಿ: ಲಾರ್ಡ್ಸ್​ನಲ್ಲಿ ಶತಕ ಸಿಡಿಸಿ ಹಲವು ದಾಖಲೆ ಬರೆದ ಸ್ಟೀವ್ ಸ್ಮಿತ್

steve smith
Photo Credit : By Author

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಅನುಭವಿ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 32ನೇ ಶತಕ ಸಿಡಿಸಿ ಮಿಂಚಿದ್ದಾರೆ. ಟೆಸ್ಟ್ ಆರಂಭದ ಮೊದಲ ದಿನ 85 ರನ್ ಬಾರಿಸಿ ಅಜೇಯರಾಗುಳಿದಿದ್ದ ಸ್ಮಿತ್, ಎರಡನೇ ದಿನ ತಮ್ಮ ಸ್ಕೋರ್​ಗೆ 15 ರನ್ ಸೇರಿಸುವ ಮೂಲಕ ಶತಕ ಪೂರೈಸಿದರು.

ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ವೇಗವಾಗಿ 32 ಶತಕಗಳನ್ನು ಸಿಡಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಸ್ಮಿತ್ ಕೇವಲ 174ನೇ ಇನ್ನಿಂಗ್ಸ್‌ನಲ್ಲಿ ಈ ದಾಖಲೆ ಬರೆದಿದ್ದಾರೆ. ಸ್ಮಿತ್​ಗೂ ಮುನ್ನ 176 ಇನ್ನಿಂಗ್ಸ್‌ಗಳಲ್ಲಿ 34 ಶತಕ ಸಿಡಿಸಿದ್ದ ರಿಕಿ ಪಾಂಟಿಂಗ್ ಅವರ ಹೆಸರಲ್ಲಿ ಈ ದಾಖಲೆ ಇತ್ತು.

ಈ ಶತಕದೊಂದಿಗೆ ಆ್ಯಶಸ್‌ನಲ್ಲಿ ಸ್ಟೀವ್ ಸ್ಮಿತ್ ತಮ್ಮ 12 ನೇ ಶತಕವನ್ನು ಪೂರ್ಣಗೊಳಿಸಿದ್ದಂತಾಗಿದೆ. ಇದರೊಂದಿಗೆ ಆ್ಯಶಸ್​​ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರ ಪೈಕಿ ಸ್ಮಿತ್, ಜಾಕ್ ಹಾಬ್ಸ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದರೊಂದಿಗೆ ಸ್ಮಿತ್, ಇಂಗ್ಲೆಂಡ್‌ನಲ್ಲಿ ತಮ್ಮ 8 ನೇ ಟೆಸ್ಟ್ ಶತಕವನ್ನು ಪೂರೈಸಿದರು. ಈ ಮೂಲಕ ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಎರಡನೇ ಯಶಸ್ವಿ ವಿದೇಶಿ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಸಕ್ರಿಯ ಕ್ರಿಕೆಟಿಗರಲ್ಲಿ ಅತಿ ಹೆಚ್ಚು ಅಂತರಾಷ್ಟ್ರೀಯ ಶತಕಗಳನ್ನು ದಾಖಲಿಸಿದವರ ಪಟ್ಟಿಯಲ್ಲಿ ಸ್ಮಿತ್ ನಾಲ್ಕನೇ ಸ್ಥಾನಕ್ಕೇರುವುದರೊಂದಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ. ಲಾರ್ಡ್ಸ್‌ನಲ್ಲಿ ಸ್ಮಿತ್ ತಮ್ಮ 44ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿದರೆ (ಟೆಸ್ಟ್‌ಗಳಲ್ಲಿ 32 ಮತ್ತು ಏಕದಿನದಲ್ಲಿ 12), ರೋಹಿತ್ ಇದುವರೆಗೆ 43 ಅಂತರರಾಷ್ಟ್ರೀಯ ಶತಕಗಳನ್ನು ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು