News Karnataka Kannada
Thursday, May 02 2024
ಕ್ರೀಡೆ

ಏಷ್ಯಾಕಪ್‌: ಭಾರತ – ಪಾಕ್‌ ನಡುವಿನ ಪಂದ್ಯದ ಪೂರ್ಣ ವಿವರ ಇಲ್ಲಿದೆ

Asia Cup 2019: Here's the full list of India vs Pakistan match
Photo Credit : IANS

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ತೀವ್ರಹಣಾಹಣಿಯ ಏಷ್ಯಾಕಪ್‌ ಪಂದ್ಯಕ್ಕಾಗಿ ಪ್ರತಿಯೊಬ್ಬರೂ ಕಾತರದಿಂದ ಕಾಯುತ್ತಿದ್ದಾರೆ. ಏಳು ಬಾರಿ ಏಷ್ಯಾಕಪ್ ಗೆದ್ದ ದಾಖಲೆ ಬರೆದಿರುವ ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ. ಮತ್ತೊಂದೆಡೆ ಪಾಕಿಸ್ತಾನ ಈ ಟೂರ್ನಿಯಲ್ಲಿ 2 ಬಾರಿ ಗೆದ್ದಿದೆ. ಈ ಬಾರಿಯ ಏಷ್ಯಾಕಪ್‌ನಲ್ಲಿ ಏನಾಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಈ ಕುರಿತು ಪಂದ್ಯ ನಡೆಯುವ ಸ್ಥಳ, ಸಮಯದ ವಿವರ ಇಲ್ಲಿದೆ. ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಸೆ.2ರಂದು ಮಧ್ಯಾಹ್ನ ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು. ಪಂದ್ಯಕ್ಕೆ ಅರ್ಧಗಂಟೆ ಮೊದಲು ಟಾಸ್ ನಡೆಯಲಿದೆ.

ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೋಡಬಹುದು (ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ ಎಚ್‌ಡಿ). ಇದಲ್ಲದೆ, ಇದನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮೊಬೈಲ್‌ನಲ್ಲಿಯೂ ನೋಡಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು