ಮುಂಬೈ: ಭಾರೀ ಕುತೂಹಲ ಕೆರಳಿಸಿದ್ದ 2023ರ ಆವೃತ್ತಿಯ ಏಷ್ಯಾಕಪ್ ಟೂರ್ನಿಯ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 17ರ ವರೆಗೆ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, ಪಾಕಿಸ್ತಾನ ಹಾಗೂ ಶ್ರೀಲಂಕಾ ದೇಶಗಳು ಜಂಟಿ ಆತಿಥ್ಯ ವಹಿಸಲಿವೆ.
ಈ ಟೂರ್ನಿಯು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 17ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯೇ ಇದ್ದರೂ, ಭಾರತ-ಪಾಕಿಸ್ತಾನದಲ್ಲಿ ಆಡಲು ಒಪ್ಪಿಗೆ ಸೂಚಿಸದ ಕಾರಣ ಟೂರ್ನಿಯನ್ನ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಏಷ್ಯಾಕಪ್ ಕ್ರಿಕೆಟ್ ಸಮಿತಿ ನಿರ್ಧರಿಸಿದೆ.
ಟೂರ್ನಿಯಲ್ಲಿ ಒಟ್ಟು 6 ತಂಡಗಳು ಪಾಲ್ಗೊಳ್ಳಲಿದ್ದು, 3 ತಂಡಗಳ 2 ಗುಂಪು ರಚಿಸಲಾಗಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ `A’ ಗುಂಪಿನಲ್ಲಿದ್ದರೆ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು `B’ ಗುಂಪಿನಲ್ಲಿ ಇರಲಿವೆ. ಎರಡು ಗುಂಪಿನಲ್ಲಿ ಅಗ್ರಸ್ಥಾನ ಪಡೆದ 2 ತಂಡಗಲು ಸೂಪರ್ ಫೋರ್ ಪ್ರವೇಶಿಸಲಿವೆ. ಆದರೆ ಪಂದ್ಯಗಳು ನಡೆಯವ ದಿನಾಂಕಗಳನ್ನ ಏಷ್ಯಾಕಪ್ ಕ್ರಿಕೆಟ್ ಸಮಿತಿ ಇನ್ನಷ್ಟೇ ಪ್ರಕಟಿಸಬೇಕಿದೆ.