News Karnataka Kannada
Sunday, May 12 2024
ಕ್ರೀಡೆ

ಏಷ್ಯಾ ಕಪ್-2023: 8ನೇ ಬಾರಿಗೆ ಏಷ್ಯಾ ಕಪ್ ಗೆದ್ದು ಬೀಗಿದ ಭಾರತ

Ind
Photo Credit : News Kannada

ಶ್ರೀಲಂಕಾ : ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರ ದಾಳಿಗೆ ತತ್ತರಿಸಿದ ಶ್ರೀಲಂಕಾದ ಬ್ಯಾಟ್ಸ್ಮ್ಯಾನ್ ಗಳು ಪೆವಿಲಿಯನಿಗೆ ಪರೇಡ್ ನಡೆಸಿದ ಪರಿಣಾಮ ಇಂದು ನಡೆದ ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ವಿಕೆಟ್ ನಷ್ಟವಿಲ್ಲದೆ ಭಾರತ ಗೆದ್ದು ಬೀಗಿದೆ.ಈ ಮೂಲಕ 8ನೇ ಬಾರಿಗೆ ಏಷ್ಯಾ ಕಪ್ ಗೆದ್ದು ಬಿಗಿದೆ.

ಭಾರತದ ಪರ ಔಟ್ ಆಗದೆ ಈಶಾನ್ ಕಿಶನ್ 23 ಹಾಗೂ ಗಿಲ್ 27 ರನ್ ಕಲೆ ಹಾಕಿ ಗೆಲುವಿನ ದಡ ಮುಟ್ಟಿಸಿದರು. ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಟೀಮ್ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿತು. ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಆ ಬಳಿಕ 4ನೇ ಓವರ್​ನಲ್ಲಿ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಕಬಳಿಸಿದರು.

ಇದರ ಬೆನ್ನಲ್ಲೇ ಮತ್ತೆರಡು ವಿಕೆಟ್ ಉರುಳಿಸಿ ಸಿರಾಜ್ ಐದು ವಿಕೆಟ್​ಗಳ ಸಾಧನೆ ಮಾಡಿದರು. ಇನ್ನು ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು. ಇದರೊಂದಿಗೆ ಶ್ರೀಲಂಕಾ ತಂಡವು 15.2 ಓವರ್​ಗಳಲ್ಲಿ 50 ರನ್​ಗಳಿಗೆ ಆಲೌಟ್ ಆಯಿತು.

ಕೇವಲ 51 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾಗೆ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ 4 ಓವರ್​ಗಳಲ್ಲೇ 34 ರನ್ ಚಚ್ಚಿದ ಈ ಜೋಡಿ ಪವರ್​ಪ್ಲೇನಲ್ಲೇ ತಂಡಕ್ಕೆ ಗೆಲುವು ತಂದುಕೊಡುವ ಕಾಯಕಕ್ಕೆ ಕೈಹಾಕಿದರು. ಅಂತಿಮವಾಗಿ 6.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಟೀಮ್ ಇಂಡಿಯಾ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ 8ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು