News Karnataka Kannada
Saturday, May 11 2024
ಕ್ರೀಡೆ

ಏಷ್ಯಾಕಪ್​ 2023: ಭಾರತ-ಶ್ರೀಲಂಕಾ ಫೈನಲ್​ಗೆ ಕ್ಷಣಗಣನೆ, ಟಾಸ್ ಗೆದ್ದ ಶ್ರೀಲಂಕಾ

Assia Cup Final
Photo Credit : News Kannada

ಕೊಲಂಬೊ: ಏಷ್ಯಾಕಪ್​ 2023 ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸುವ ಇರಾದೆಯಲ್ಲಿದೆ ಉಭಯ ತಂಡಗಳು.

ಇದಕ್ಕೂ ಮುನ್ನ ಭಾರತ ಮತ್ತು ಶ್ರೀಲಂಕಾ ಸೂಪರ್-4 ಹಂತದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 41 ರನ್​ಗಳಿಂದ ಜಯ ಸಾಧಿಸಿತ್ತು. ಹೀಗಾಗಿ ಭಾರತ ತಂಡವು ಪ್ರಶಸ್ತಿ ಗೆಲ್ಲುವ ಫೇವರೇಟ್ ಎನಿಸಿಕೊಂಡಿದೆ. ಪಂದ್ಯವು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಮಾಡಲಿದೆ.

ಏಷ್ಯಾಕಪ್​ಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ , ಪ್ರಸಿದ್ಧ ಕೃಷ್ಣ, ತಿಲಕ್ ವರ್ಮ.

ಶ್ರೀಲಂಕಾ ಕ್ರಿಕೆಟ್ ತಂಡ: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಲ್ ಜೆನಿತ್ ಪೆರೇರಾ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವ, ಮತಿಶ ಪತಿರಾನ, ಸದಿರ ಸಮರವಿಕ್ರಮ, ಮಹಿಷ್ ತೀಕ್ಷಣ, ದುನಿತ್ ವೆಲ್ಲೇಜ್, ಕಸುನ್ ರಜಿತ, ಫೆರ್ನಾಂಡೊ ಮತ್ತು ಪ್ರಮೋದ್ ಮಧುಶನ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು