ಕ್ರೀಡೆ

ಏಷ್ಯಾಕಪ್‌ 2023: ನಾಳೆ ಭಾರತೀಯ ತಂಡದ ಹೆಸರು ಪ್ರಕಟ

ನವದೆಹಲಿ: ಬಿಸಿಸಿಐ ಆಯ್ಕೆ ಸಮಿತಿಯು ಆಗಸ್ಟ್ 21ರಂದು ನವದೆಹಲಿಯಲ್ಲಿ 2023 ರ ಏಷ್ಯಾಕಪ್‌ಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡವನ್ನು ಪ್ರಕಟಿಸಲು ಸಜ್ಜಾಗಿದೆ.

ಈ ಭಾರಿಯ ಏಷ್ಯಾಕಪ್ ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಭಾರತ ತನ್ನ ಆರಂಭಿಕ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನದ ವಿರುದ್ಧ ಕ್ಯಾಂಡಿಯಲ್ಲಿ ಆಡಲಿದೆ.

ಏಷ್ಯಾಕಪ್​ಗೆ 17 ಸದಸ್ಯರ ತಂಡವನ್ನು ಆಯ್ಕೆ ಮಾಡಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅನುಮತಿ ನೀಡಿದೆ. ಇದರ ಪ್ರಕಾರ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕೂಡ 17 ಸದಸ್ಯರ ತಂಡವನ್ನು ಆಯ್ಕೆ ಮಾಡಿವೆ. ಹೀಗಾಗಿ ಭಾರತವು ಅದೇ ರೀತಿ ಮಾಡುವ ಸಾಧ್ಯತೆಯಿದೆ.

ಏಕೆಂದರೆ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಈಗತಾನೇ ಚೇತರಿಸಿಕೊಂಡು ತಂಡಕ್ಕೆ ಮರಳಲು ಯತ್ನಿಸುತ್ತಿರುವ ಕಾರಣ ಟೀಂ ಇಂಡಿಯಾಕ್ಕೆ ಈ ಇಬ್ಬರ ಪ್ರದರ್ಶನದ ಬಗ್ಗೆ ಇನ್ನು ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಏಷ್ಯಾಕಪ್​ನಲ್ಲಿ 17 ಸದಸ್ಯರನ್ನು ಆಯ್ಕೆ ಮಾಡಿ, ಎಲ್ಲರನ್ನೂ ಪರೀಕ್ಷಿಸಲು ಬಿಸಿಸಿಐ ಮುಂದಾಗಿದೆ. ಆ ಬಳಿಕ ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸುವ ಸಾಧ್ಯತೆಗಳಿವೆ.
ವೆಸ್ಟ್ ಇಂಡೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ತಿಲಕ್ ವರ್ಮಾ ಏಷ್ಯಾಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ.

Sneha Gowda

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

23 seconds ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

7 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

14 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

26 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

31 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

46 mins ago