News Karnataka Kannada
Thursday, May 16 2024
ಕ್ರೀಡೆ

ಏಷ್ಯಾಕಪ್ 2023: ಪಾಕ್ ಪಡೆಯನ್ನು ಮಕಾಡೆ ಮಲಗಿಸಿದ ಟೀಮ್ ಇಂಡಿಯಾ

Photo Credit : News Kannada

ಏಷ್ಯಾಕಪ್​ನ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ 228 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಭಾನುವಾರ ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಶಾದಾಬ್ ಖಾನ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ರೋಹಿತ್ ಶರ್ಮಾ (56 ರನ್, 49ಎಸೆತ, 4 ಸಿಕ್ಸ್, 6 ಫೋರ್) ಕ್ಯಾಚ್ ನೀಡಿ ನಿರ್ಗಮಿಸಿದರು. ಇದರ ಬೆನ್ನಲ್ಲೇ 52 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ 58 ರನ್​ಗಳಿಸಿದ್ದ ಶುಭ್​ಮನ್ ಗಿಲ್ ಶಾಹೀನ್ ಅಫ್ರಿದಿ ಎಸೆತದಲ್ಲಿ ಔಟಾದರು.

ಮತ್ತೊಂದೆಡೆ ಸಿಡಿಲಬ್ಬರದೊಂದಿಗೆ ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್​ ಸಿಡಿಸಿದರು. ಇದರೊಂದಿಗೆ 50 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತ 356 ರನ್​ಗೆ ಬಂದು ನಿಂತಿತು.

357 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡ ಕೇವಲ 128 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಟೀಮ್ ಇಂಡಿಯಾ 228 ರನ್​ಗಳ ಅಮೋಘ ಗೆಲುವು ದಾಖಲಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು