News Karnataka Kannada
Monday, April 15 2024
Cricket
ಕ್ರೀಡೆ

ಏಷ್ಯಾಕಪ್ 2023: ಭಾರತ-ಪಾಕಿಸ್ತಾನ ಮುಖಾಮುಖಿಗೆ ಡೇಟ್ ಫಿಕ್ಸ್

asia-cup-2023
Photo Credit : By Author

ಬಹುನಿರೀಕ್ಷಿತ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿ ಆಗಸ್ಟ್ 30 ರಿಂದ ಶುರುವಾಗಲಿದೆ. ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ತಂಡವು ನೇಪಾಳ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮುಲ್ತಾನ್​ನಲ್ಲಿ ನಡೆಯಲಿದೆ. ಇನ್ನು ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಸೆಪ್ಟೆಂಬರ್ 2 ರಂದು ಜರುಗಲಿದ್ದು, ಈ ಪಂದ್ಯಕ್ಕೆ ಶೀಲಂಕಾದ ಕ್ಯಾಂಡಿ ಮೈದಾನವು ಆತಿಥ್ಯವಹಿಸಲಿದೆ.

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ.

ಆಗಸ್ಟ್ 30 ರಿಂದ ಶುರುವಾಗಲಿರುವ ಈ ಬಾರಿಯ ಏಷ್ಯಾಕಪ್​ ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಇದರ ಫೈನಲ್ ಪಂದ್ಯವು ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ನಡೆಯಲಿದೆ. ಕಳೆದ ವರ್ಷ ಟಿ20 ವಿಶ್ವಕಪ್ ಇದ್ದ ಕಾರಣ ಏಷ್ಯಾಕಪ್ ಅನ್ನು ಟಿ20 ಮಾದರಿಯಲ್ಲಿ ಆಯೋಜಿಸಲಾಗಿತ್ತು. ಇದೀಗ ಏಕದಿನ ವಿಶ್ವಕಪ್​ ಹಿನ್ನಲೆಯಲ್ಲಿ 50 ಓವರ್​ಗಳ ಪಂದ್ಯಾಟವನ್ನು ಆಯೋಜಿಸಲಾಗುತ್ತಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು