ಸೂಪರ್ ಫೋರ್ ಹಂತದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಈಗಾಗಲೇ ಫೈನಲ್ಗೆ ಪ್ರವೇಶಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸುವ ತಂಡದೊಡನೆ ಭಾರತ ಫೈನಲ್ ಆಡಬೇಕಿದೆ. ಇತ್ತ ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಪಾಕಿಸ್ತಾನ್ ಮುಖಾಮುಖಿಯಾಗುತ್ತಿದ್ದು, ಈ ತಂಡಗಳಲ್ಲಿ ಒಂದರ ವಿರುದ್ಧ ಟೀಮ್ ಇಂಡಿಯಾ ಫೈನಲ್ ಆಡುವುದು ಖಚಿತ.
ಪಾಕಿಸ್ತಾನ್ ಹಾಗೂ ಶ್ರೀಲಂಕಾ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಬೆಳಿಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ ಪ್ರೇಮದಾಸ ಮೈದಾನವನ್ನು ಟರ್ಪಲ್ಗಳಿಂದ ಕವರ್ ಮಾಡಲಾಗಿದೆ. ಹೀಗಾಗಿ ಇಂದಿನ ಪಂದ್ಯ ತಡವಾಗಿ ಶುರುವಾಗಲಿದೆ. ಒಂದು ವೇಳೆ ಈ ಪಂದ್ಯವು ಮಳೆಯಿಂದ ರದ್ದಾದರೆ ಶ್ರೀಲಂಕಾ ತಂಡವು ಫೈನಲ್ಗೆ ಅರ್ಹತೆ ಪಡೆಯಲಿದೆ.