ನವದೆಹಲಿ: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಈ ಬಾರಿ 50 ಓವರ್ಗಳ ಮಾದರಿಯಲ್ಲಿ ನಡೆಯಲಿದ್ದು, ಇದೇ ವರ್ಷದ ಸೆಪ್ಟೆಂಬರ್ನಲ್ಲಿ ಆಯೋಜಿಸಲಾಗುವುದು ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಹೇಳಿದೆ.
ಆದರೆ ಟೂರ್ನಿಯ ವೇಳಾಪಟ್ಟಿ ಮತ್ತು ಆತಿಥ್ಯ ವಹಿಸುವ ದೇಶದ ಬಗ್ಗೆ ಎಸಿಸಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈ ಬಾರಿಯ ಟೂರ್ನಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಬೇಕು. ಆದರೆ ಪಾಕ್ನಲ್ಲಿ ಟೂರ್ನಿ ನಡೆಸಿದರೆ, ತಮ್ಮ ತಂಡವನ್ನು ಕಳುಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ.
ಏಷ್ಯಾಕಪ್ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಗಾನಿಸ್ತಾನ ಮತ್ತು ಅರ್ಹತಾ ಹಂತದಲ್ಲಿ ಗೆದ್ದು ಬರುವ ಒಂದು ತಂಡ ಒಳಗೊಂಡಂತೆ ಒಟ್ಟು ಆರು ತಂಡಗಳು ಪಾಲ್ಗೊಳ್ಳಲಿವೆ.