Categories: ಕ್ರೀಡೆ

ಜಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಗೆದ್ದ ಹಾಸನದ ಡಿಪಿ ಮನು

ಹಾಸನ: ಜುಲೈ 12 ರಿಂದ 16 ರವರೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ ಸುಪಾಚಲ್ಸೈ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 25 ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಭಾರತದ ಅಥ್ಲಿಟ್​ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಬಾರಿ ಕ್ರೀಡಾಕೂಟದಲ್ಲಿ ಭಾರತ ಪರ 6 ಚಿನ್ನ, 12 ಬೆಳ್ಳಿ, 9 ಕಂಚಿನ ಪದಕಗಳಿಗೆ ಮುತ್ತಿಟ್ಟ ಅಥ್ಲಿಟ್​ಗಳು ಪದಕಗಳ ಪಟ್ಟಿಯಲ್ಲಿ ಭಾರತಕ್ಕೆ 3ನೇ ಸ್ಥಾನ ತಂದುಕೊಟ್ಟಿದ್ದಾರೆ.

ಈ ವರ್ಷ ಜಪಾನ್ 16 ಚಿನ್ನ, 11 ಬೆಳ್ಳಿ ಮತ್ತು 10 ಕಂಚಿನ ಪದಕ ಸೇರಿದಂತೆ ಒಟ್ಟು 37 ಪದಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡರೆ, ಚೀನಾ 8 ಚಿನ್ನ, 8 ಬೆಳ್ಳಿ ಮತ್ತು 6 ಕಂಚು ಸೇರಿದಂತೆ ಒಟ್ಟು 22 ಪದಕಗಳನ್ನು ಗೆದ್ದು 2ನೇ ಸ್ಥಾನ ಪಡೆದುಕೊಂಡಿತು.

ಇನ್ನು ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಭಾಗವಹಿಸಿದ್ದ ಹಾಸನದ ಹೆಮ್ಮೆಯ ಕುವರ ಡಿಪಿ ಮನು ಜಾವೆಲಿನ್ ಥ್ರೋ ವಿಭಾಗದಲ್ಲಿ 81.01 ಮೀ ದೂರ ಜಾವೆಲಿನ್ ಎಸೆಯುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟರು. ಒಲಂಪಿಕ್ಸ್ ಹೀರೋ ನೀರಜ್ ಚೋಪ್ರಾ ಅವರು ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್‌ಶಿಪ್‌ಗಾಗಿ ತಯಾರಿ ನಡೆಸುತ್ತಿರುವ ಕಾರಣ ಈ ಕ್ರೀಡಾಕೂಟದಿಂದ ಹಿಂದೆ ಸರಿದಿದ್ದರು. ಹೀಗಾಗಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಭರವಸೆಯಾಗಿದ್ದ ಮನು ಕೇವಲ 2 ಮೀಟರ್ ಅಂತರದಿಂದ ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದರು.

https://twitter.com/VishankRazdan/status/1680525652070486017?ref_src=twsrc%5Etfw%7Ctwcamp%5Etweetembed%7Ctwterm%5E1680525652070486017%7Ctwgr%5E24913f4588bfb441c367be9391ccffc66dcff04e%7Ctwcon%5Es1_&ref_url=https%3A%2F%2Ftv9kannada.com%2Fsports%2Fasian-athletics-championships-dp-manu-wins-asian-silver-medal-with-dramatic-final-throw-psr-624515.html

Ashitha S

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

5 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

7 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

28 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

38 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

40 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

51 mins ago