ಭಾರತ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಇಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಎರಡು ಗೋಲುಗಳನ್ನು ಗಳಿಸಿ ತಂಡವನ್ನು ಅಜೇಯವಾಗಿರಿಸಿದರು. 8ನೇ ನಿಮಿಷದಲ್ಲಿ ನದೀಮ್ ಅಹ್ಮದ್ ಪಾಕ್ ಪರ ಖಾತೆ ತೆರೆದರೂ, ಭಾರತ ತನ್ನ ಸಾಂಪ್ರದಾಯಿಕ ಎದುರಾಳಿಗಳನ್ನು ಮಣಿಸುವಲ್ಲಿ ಯಶಸ್ವಿಯಾಯಿತು.
ಚೀನಾದಲ್ಲಿ ನಡೆಯುತ್ತಿರುವ ಈ ಟೂರ್ನಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಿದ್ದ ಟೀಂ ಇಂಡಿಯಾ ಮತ್ತೊಮ್ಮೆ ಅಮೋಘ ಪ್ರದರ್ಶನ ನೀಡಿ ಸತತ ಐದನೇ ಗೆಲುವು ಸಾಧಿಸಿತು. ಈ ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಪೆನಾಲ್ಟಿ ಕಾರ್ನರ್ ಮೂಲಕ 2 ಗೋಲು ಗಳಿಸಿದ ಭಾರತದ ನಾಯಕ ಹರ್ಮನ್‌ಪ್ರೀತ್ ಸಿಂಗ್ ತಂಡದ ಗೆಲುವಿನ ಹೀರೋ ಎನಿಸಿಕೊಂಡರೆ, ಆರಂಭದಲ್ಲೇ ಗೋಲು ದಾಖಲಿಸಿ ಭಾರತಕ್ಕೆ ತಿರುಗೇಟು ನೀಡಿದ್ದ ಪಾಕಿಸ್ತಾನ ಅಂತಿಮವಾಗಿ ಪಂದ್ಯವನ್ನು 2-1 ಅಂತರದಿಂದ ಕಳೆದುಕೊಂಡಿತು.
Ad