ಚೆನ್ನೈ: ಚೆನ್ನೈನಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಭಾರತ ಹಾಕಿ ತಂಡ ಒಂದೇ ಒಂದು ಪಂದ್ಯವನ್ನು ಸೋಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು, ಸೆಮಿಫೈನಲ್ಗೆ ಎಂಟ್ರಿಕೊಟ್ಟಿದೆ.
ರೌಂಡ್ ರಾಬಿನ್ ಮಾದರಿಯಲ್ಲಿ ನಡೆದ ಲೀಗ್ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದ ಭಾರತ ಒಂದು ಪಂದ್ಯದವನ್ನು ಡ್ರಾ ಮಾಡಿಕೊಂಡಿತ್ತು. ಇದೀಗ ಹರ್ಮನ್ಪ್ರೀತ್ ಸಿಂಗ್ ನಾಯಕತ್ವದ ಭಾರತ ಪುರುಷರ ಹಾಕಿ ತಂಡ ಇಂದು ನಡೆಯಲ್ಲಿರುವ (ಆಗಸ್ಟ್ 11) ಸೆಮಿಫೈನಲ್ ಪಂದ್ಯದಲ್ಲಿ ಭಾರತ-ಜಪಾನ್ ತಂಡವನ್ನು ಎದುರಿಸಲಿದೆ.
ಭಾರತ ಮತ್ತು ಜಪಾನ್ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯ ರಾತ್ರಿ 8.30 ರಿಂದ ಆರಂಭವಾಗಲಿದೆ. ಈ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.