News Karnataka Kannada
Sunday, May 19 2024
ಕ್ರೀಡೆ

ಏಷ್ಯನ್‌ ಗೇಮ್ಸ್‌ 2023: ಸ್ಕೇಟಿಂಗ್​ನಲ್ಲಿ ಎರಡು ಪದಕ ಗೆದ್ದ ಭಾರತ

Asian Games 2023: India wins two medals in skating
Photo Credit : News Kannada

ಹ್ಯಾಂಗ್ಝೌ: ಭಾರತದ ಮಹಿಳಾ ಮತ್ತು ಪುರುಷರ ಸ್ಕೇಟಿಂಗ್ ತಂಡವು ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದೆ. ಸಂಜನಾ ಬತುಲಾ, ಕಾರ್ತಿಕಾ ಜಗದೀಶ್ವರನ್, ಹೀರಾಲ್ ಸಾಧು ಮತ್ತು ಆರತಿ ಕಸ್ತೂರಿ ರಾಜ್ ಅವರನ್ನೊಳಗೊಂಡ ಭಾರತದ ಮಹಿಳಾ ರೋಲರ್ ಸ್ಕೇಟಿಂಗ್ ತಂಡವು 3000 ಮೀಟರ್ ಸ್ಪೀಡ್ ಸ್ಕೇಟಿಂಗ್ ರಿಲೇಯಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಇಂದು ನಡೆದ ಈ ಸ್ಪರ್ಧೆಯಲ್ಲಿ ಭಾರತ ಮಹಿಳಾ ತಂಡ ಕ್ವಾರ್ಟೆಟ್ 4 ನಿಮಿಷ ಮತ್ತು 34.861 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸಿತು. 4 ನಿಮಿಷ 19.447 ಸೆಕೆಂಡ್‌ಗಳಲ್ಲಿ ಗುರಿ ತಲುಪಿದ ಚೈನೀಸ್ ತೈಪೆ ಚಿನ್ನದ ಪದಕ ಗೆದ್ದರೆ, ದಕ್ಷಿಣ ಕೊರಿಯಾ 4 ನಿಮಿಷ 21.146 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದುಕೊಂಡಿತು. ಪುರುಷರ ಸ್ಪೀಡ್ ಸ್ಕೇಟಿಂಗ್ 3000ಮೀ. ರಿಲೇಯಲ್ಲಿ ಕಂಚಿಗೆ ತೃಪ್ತಿಪಟ್ಟಿದೆ. ಆರ್ಯನ್ ಪಾಲ್, ಆನಂದ್ ಕುಮಾರ್, ಸಿದ್ಧಾಂತ್ & ವಿಕ್ರಮ್ ಅವರನ್ನೊಳಗೊಂಡ ತಂಡ 4:10.128 ಸೆಕೆಂಡುಗಳಲ್ಲಿ ಓಟವನ್ನು ಮುಗಿಸಿ 3ನೇ ಸ್ಥಾನಿಯಾಯಿತು. ಇದು ಇಂದು(ಅ.02) ಭಾರತಕ್ಕೆ ಒಲಿದ ಎರಡನೇ ಪದಕ ಇದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು