Categories: ಕ್ರೀಡೆ

ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಕಮಾಲ್‌: 10,000 ಮೀಟರ್ ಓಟದಲ್ಲಿ ಬೆಳ್ಳಿ, ಕಂಚಿನ ಪದಕ

ಹ್ಯಾಂಗ್‌ಝೌ: ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳನ್ನು ಗೆದ್ದಿದ್ದಾರೆ.

ಶನಿವಾರ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಪುರುಷರ 10000 ಮೀಟರ್ಸ್ ಓಟದಲ್ಲಿ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು.

ಕಾರ್ತಿಕ್ 28:15.38 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದರೆ, ಗುಲ್ವೀರ್ 28:17.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದರು. ಇಬ್ಬರೂ ಭಾರತೀಯರು ಅಂತಿಮ 100 ಮೀಟರ್‌ನಲ್ಲಿ ಪದಕಕ್ಕಾಗಿ ಪೈಪೋಟಿಯಲ್ಲಿದ್ದಾಗ ಆಟಗಾರರು ಪರಸ್ಪರ ಡಿಕ್ಕಿ ಹೊಡೆದು ಬಿದ್ದರು. ಬಹ್ರೇನ್‌ನ ಬಿರ್ಹಾನು ಯಮತಾವ್ ಬಲೆವ್ 28:13.62 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದರು.

Ashika S

Recent Posts

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

17 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

29 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

2 hours ago