ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಫುಟ್ಬಾಲ್ ಪಂದ್ಯದಲ್ಲಿ ಭಾರತ ತಂಡವು ಮೊದಲ ಜಯ ಸಾಧಿಸಿದೆ. ಬಾಂಗ್ಲಾದೇಶ್ ವಿರುದ್ಧ ನಡೆದ ತನ್ನ 2ನೇ ಪಂದ್ಯದಲ್ಲಿ 1-0 ಅಂತರದಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ 3 ಅಂಕಗಳನ್ನು ಸಂಪಾದಿಸಿದೆ.
ಇದಕ್ಕೂ ಮುನ್ನ ನಡೆದ ಚೀನಾ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು 5-1 ಅಂತರದಿಂದ ಸೋಲನುಭವಿಸಿತ್ತು. ಇದೀಗ ಬಾಂಗ್ಲಾದೇಶ್ ತಂಡಕ್ಕೆ ಸೋಲುಣಿಸುವ ಮೂಲಕ ಅಂಕ ಪಟ್ಟಿಯಲ್ಲಿ ಖಾತೆ ತೆರೆದಿದೆ.