ಚೀನಾ: ಉತ್ತರಪ್ರದೇಶ ಐಎಎಸ್ ಕೇಡರ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ಸುಹಾಸ್ ಎಲ್ ಯತಿರಾಜ್ ಅವರು ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಇಡೀ ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ಪುರುಷರ ಸಿಂಗಲ್ಸ್ ಎಸ್ಎಲ್-4 ವಿಭಾಗದ ಫೈನಲ್ ಪಂದ್ಯದಲ್ಲಿ ಸುಹಾಸ್, ಮಲೇಷ್ಯಾದ ಮೊಹಮ್ಮದ್ ಅಮೀನ್ ಅವರನ್ನು 2-1 ಅಂತರದಿಂದ ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
SUHAS YATHIRAJ🥇 🏸
Last point and winning movements#AsianParaGames #AsianParaGames2022https://t.co/27lVwJhPJe https://t.co/jc6dXFRA5E
— SPORTS ARENA🇮🇳 (@SportsArena1234) October 27, 2023