ಲಕ್ನೋ: ಏಕದಿನ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ಕುಸಾಲ್ ಮೆಂಡಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು ಇದುವರೆಗೆ 103 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆಸ್ಟ್ರೇಲಿಯಾ ತಂಡ 63 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡ ಕೇವಲ 36 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ನಾಲ್ಕು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.
ಶ್ರೀಲಂಕಾ (ಪ್ಲೇಯಿಂಗ್ XI): ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಚಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ದಿಲ್ಶನ್ ಮಧುಶಂಕ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ಆಡ್ಯಂ ಝಂಪಾ, ಜೋಶ್ ಹ್ಯಾಝಲ್ವುಡ್.