ಕ್ರೀಡೆ

ಏಕದಿನ ವಿಶ್ವಕಪ್​: ಟಾಸ್ ಗೆದ್ದ ಶ್ರೀಲಂಕಾ

ಲಕ್ನೋ: ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ಕುಸಾಲ್ ಮೆಂಡಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಉಭಯ ತಂಡಗಳು ಇದುವರೆಗೆ 103 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆಸ್ಟ್ರೇಲಿಯಾ ತಂಡ 63 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡ ಕೇವಲ 36 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ನಾಲ್ಕು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.

ಶ್ರೀಲಂಕಾ (ಪ್ಲೇಯಿಂಗ್ XI): ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಚಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ದಿಲ್ಶನ್ ಮಧುಶಂಕ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ಆಡ್ಯಂ ಝಂಪಾ, ಜೋಶ್ ಹ್ಯಾಝಲ್‌ವುಡ್.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago