News Karnataka Kannada
Monday, April 29 2024
ಕ್ರೀಡೆ

ವಿಶ್ವಕಪ್​ನಲ್ಲಿಂದು ಆಸ್ಟ್ರೇಲಿಯಾ-ಶ್ರೀಲಂಕಾ ಕದನ

Australia vs Sri Lanka World Cup 2019
Photo Credit : Twitter

ಲಖನೌ: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 14ನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಮತ್ತು ಕುಸಲ್ ಮೆಂಡೀಸ್ ನೇತೃತ್ವದ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಇದು ಸೋತವರ ಕಾಳಗ ಎನ್ನಬಹುದು. ಯಾಕೆಂದರೆ ಉಭಯ ತಂಡಗಳು ಇದುವರೆಗೆ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಆಸೀಸ್-ಲಂಕಾ ತಂಡ ಮೊದಲ ಗೆಲುವಿಗಾಗಿ ಕಾಯುತ್ತಿವೆ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

ಶ್ರೀಲಂಕಾ ತಂಡ:  ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಕುಸಾಲ್ ಪೆರೇರಾ, ಧನಂಜಯ ಡಿ ಸಿಲ್ವಾ, ಚಾಮಿಕಾ ಕರುಣಾರತ್ನ, ಕಸುನ್ ರಜಿತ, ಲಹಿರು ಕುಮಾರ, ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ದಿಲ್ಶಾನ್ ಮದುಶಾಂಕ, ಮಥೀಶ ಪತಿರಣ, ಮಹೇಶ ತೀಕ್ಷಣ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು