News Karnataka Kannada
Saturday, May 04 2024
ಕ್ರೀಡೆ

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಮೆಗ್ ಲ್ಯಾನಿಂಗ್

Meg Lanning
Photo Credit : News Kannada

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಯಾವುದೇ ಮುನ್ಸೂಚನೆ ನೀಡದೆ ದಿಢೀರ್ ಆಗಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ನಾಯಕಿ ಎನಿಸಿಕೊಂಡಿರುವ ಇವರು ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕ್ರಿಕೆಟ್‌ನಿಂದ ಅನಿರ್ದಿಷ್ಟ ವಿರಾಮವನ್ನು ಪಡೆದುಕೊಂಡಿದ್ದರು. ಆದಾಗ್ಯೂ, ಆಸ್ಟ್ರೇಲಿಯನ್ ಬೋರ್ಡ್ ಇವರು ಸದ್ಯದಲ್ಲೇ ಪುನರಾಗಮನ ಮಾಡಲಿದ್ದಾರೆ ಎಂದು ಹೇಳಿತ್ತು. ಆದರೆ ಲ್ಯಾನಿಂಗ್ 31 ನೇ ವಯಸ್ಸಿನಲ್ಲಿ ಕ್ರಿಕೆಟ್‌ನಿಂದ ದೂರವಾಗಲು ನಿರ್ಧರಿಸಿದ್ದಾರೆ.

ಮೆಗ್ ಲ್ಯಾನಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ವಿಚಾರ ಹೇಳಲು ತುಂಬಾ ಕಷ್ಟವಾಗುತ್ತಿದೆ. ಆದರೆ, ಇದು ಸರಿಯಾದ ನಿರ್ಧಾರ ಎಂದು ಹೇಳಿದ್ದಾರೆ. “ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಹಿಂದೆ ಸರಿಯುವ ನಿರ್ಧಾರವನ್ನು ಮಾಡುವುದು ಕಷ್ಟಕರವಾಗಿತ್ತು, ಆದರೆ ಇದು ನನಗೆ ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ” ಎಂದು ಲ್ಯಾನಿಂಗ್ ಹೇಳಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು