News Karnataka Kannada
Thursday, May 02 2024
ಕ್ರೀಡೆ

ಪಾಕ್ ತಂಡದ ನಾಯಕನಾಗಿ ಬಾಬರ್ ಆಝಂ ಮರು ನೇಮಕ

Cap
Photo Credit : NewsKarnataka

ಪಾಕಿಸ್ತಾನ್ ತಂಡದ ನಾಯಕನಾಗಿ ಬಾಬರ್ ಆಝಂ ಮತ್ತೆ ನೇಮಕವಾಗಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುಂಚಿತವಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಂಡದ ನಾಯಕನನ್ನು ಬದಲಿಸಿದ್ದು, ಅದರಂತೆ ಇದೀಗ ಬಾಬರ್​ಗೆ ಮತ್ತೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಇದಕ್ಕೂ ಮುನ್ನ, 2023 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಹೀನಾಯ ಪ್ರದರ್ಶನ ನೀಡಿತ್ತು. ಈ ಹಿನ್ನಲೆಯಲ್ಲಿ ಬಾಬರ್ ಆಝಂ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ಟಿ20 ತಂಡ ಹಾಗೂ ಏಕದಿನ ತಂಡಗಳಿಗೆ ಶಾಹೀನ್ ಅಫ್ರಿದಿಯನ್ನು ಹಾಗೂ ಟೆಸ್ಟ್ ಕ್ರಿಕೆಟ್​ಗೆ ಶಾನ್ ಮಸೂದ್ ಅವರನ್ನು ಹೊಸ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

ಅದರಂತೆ ಶಾಹೀನ್ ಅಫ್ರಿದಿ ನಾಯಕತ್ವದಲ್ಲಿ ನ್ಯೂಝಿಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಿರುವ ಪಾಕಿಸ್ತಾನ್ ತಂಡವು 4-1 ಅಂತರದಿಂದ ಸೋಲನುಭವಿಸಿದೆ. ಇನ್ನು ಶಾನ್ ಮಸೂದ್ ಮುಂದಾಳತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಕ್ ತಂಡವು 3-0 ಅಂತರದಿಂದ ಮುಗ್ಗರಿಸಿಕೊಂಡಿದೆ. ಹೀಗಾಗಿ ಪಾಕ್ ಕ್ರಿಕೆಟ್ ಬೋರ್ಡ್​ನಲ್ಲಿ ಮತ್ತೆ ನಾಯಕತ್ವದ ಬದಲಾವಣೆ ಬಗ್ಗೆ‌ ಕೂಗು ಕೇಳಿ ಬಂದಿತ್ತು. ಹಾಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೊಸ ಅಧ್ಯಕ್ಷರಾದ ಸೈಯದ್ ಮೊಹ್ಸಿನ್ ರಾಝ ನಖ್ವಿ ಅವರು ಪಾಕ್ ತಂಡದ ನೂತನ ನಾಯಕರಾಗಿ ಬಾಬರ್ ಆಝಂ ಅವರನ್ನು ಮತ್ತೆ ನೇಮಕ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು