ಅಭಿಮಾನಿಗಳೊಂದಿಗೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಝಂ ಅನುಚಿತವಾಗಿ ವರ್ತಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ನಡುವೆ ಟಿ20 ಸರಣಿ ನಡೆಯುತ್ತಿದ್ದು, ಈ ಸರಣಿಯ ಬಿಡುವಿನ ವೇಳೆ ಬಾಬರ್ ಕಾರ್ಡಿಫ್ ನಗರದಲ್ಲಿ ಕಾಣಿಸಿಕೊಂಡಿದ್ದರು. ಇದೇ ವೇಳೆ ಅಭಿಮಾನಿಗಳು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಕೋಪಗೊಂಡ ಬಾಬರ್ ಆಝಂ ಅಭಿಮಾನಿಗಳು ನಿಂದಿಸಿದರು. ಪಾಕ್ ನಾಯಕನ ನಡೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್ ಮತ್ತು ಪಾಕಿಸ್ತಾನ್ ನಡುವಣ 4 ಪಂದ್ಯಗಳ ಟಿ20 ಸರಣಿಯ 2 ಪಂದ್ಯಗಳು ಮಳೆಗೆ ಅಹುತಿಯಾಗಿದೆ. ಇದಾಗ್ಯೂ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ ಇಂಗ್ಲೆಂಡ್ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ಕೊನೆಯ ಟಿ20 ಪಂದ್ಯ ಮಾತ್ರ ಉಳಿದಿದ್ದು, ಈ ಮ್ಯಾಚ್​ ಬಳಿಕ ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ತಂಡಗಳು ಟಿ20 ವಿಶ್ವಕಪ್​ಗಾಗಿ ಅಮೆರಿಕಕ್ಕೆ ತೆರಳಲಿದೆ.

ಈ ಬಾರಿಯ ಟಿ20 ವಿಶ್ವಕಪ್​ನ ಲೀಗ್​ನಲ್ಲೇ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಗ್ರೂಪ್ ಎ ನಲ್ಲಿದ್ದು, ಅದರಂತೆ ಜೂನ್ 9 ರಂದು  ಪಂದ್ಯ ನಡೆಯಲಿದೆ.