News Karnataka Kannada
Saturday, May 04 2024
ಕ್ರೀಡೆ

ಪಾಕಿಸ್ತಾನ ಕ್ರಿಕೆಟ್‌ ತಂಡ ನಾಯಕತ್ವ ತ್ಯಜಿಸಿದ ಬಾಬರ್ ಅಜಮ್!

Babar Azam resigned as the captain of the Pakistan cricket team!
Photo Credit : News Kannada

ಇಸ್ಲಾಮಾಬಾದ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಕೇವಲ 4 ಪಂದ್ಯ ಗೆದ್ದು ಲೀಗ್ ಹಂತದಿಂದಲೇ ಹೊರಬಿದ್ದ ಪಾಕಿಸ್ತಾನ ತಂಡದಲ್ಲಿ ಮೇಜರ್ ಸರ್ಜರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಪಾಕಿಸ್ತಾನ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ರಾಜೀನಾಮೆ ನೀಡಿದ್ದರು. ಇದು ಮೊದಲ ತಲೆದಂಡವಾಗಿತ್ತು. ಇದೀಗ ಬಾಬರ್ ಅಜಮ್ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ರಾಜೀನಾಮೆ ಘೋಷಿಸಿದ್ದಾರೆ.

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಕೇವಲ 8 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಪ್ರಮುಖ ತಂಡಗಳ ವಿರುದ್ಧ ಸೋಲಿನ ಜೊತೆಗೆ ಭಾರತ ಹಾಗೂ ಆಫ್ಘಾನಿಸ್ತಾನ ವಿರುದ್ದ ಸೋಲು ಪಾಕಿಸ್ತಾನಕ್ಕೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ಬಾಬರ್ ಅಜಮ್ ಕೂಡ ಕಾರಣ ಅನ್ನೋ ಆರೋಪ ಬಹುತೇಕ ಮಾಜಿ ಕ್ರಿಕೆಟಿಗರು ಮಾಡಿದ್ದರು. ನಾಯಕತ್ವ ತ್ಯಜಿಸುವ ಪ್ರಶ್ನೆ ಇಲ್ಲ ಎಂದಿದ್ದ ಬಾಬರ್ ಅಜಮ್ ಇದೀಗ ತವರಿಗೆ ಮರಳುತ್ತಿದ್ದ ಪಾಕಿಸ್ತಾನ ನಾಯಕತ್ವ ತೊರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು