ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ ಟ್ರೋಫಿಗೆ ಇನ್ನೇನು ಮೂರು ತಿಂಗಳು ಬಾಕಿ ಇದೆ. ಮುಂದಿನ ವರ್ಷ ಫೆಬ್ರವರಿ 19ನೇ ತಾರೀಕಿನಿಂದ ಮಾರ್ಚ್ 9 ರವರೆಗೂ ನಡೆಯಲಿರೋ ಮಹತ್ವದ ಚಾಂಪಿಯನ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸಲಿದೆ.
ಕಳೆದ ತಿಂಗಳಿನಿಂದ ಪಾಕಿಸ್ತಾನ ಕ್ರಿಕೆಟಿಗರಿಗೆ ಪಿಸಿಬಿ ಸಂಬಳ ನೀಡಿಲ್ಲ ಎಂದು ವರದಿಯಾಗಿದೆ. ಇದು 2025ರ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪಾಕಿಸ್ತಾನ ಆಟಗಾರರಿಗೆ ಜುಲೈನಿಂದ ಅಕ್ಟೋಬರ್ 2024 ರವರೆಗೆ ಪಿಸಿಬಿ ಸಂಬಳ ನೀಡಿಲ್ಲ.
ಇದರ ಪರಿಣಾಮ ಶಾಹೀನ್ ಆಫ್ರಿದಿ, ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಮ್ ರೀತಿಯ ಸ್ಟಾರ್ ಆಟಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿಯೇ ಪಾಕ್ ತಂಡದ ನಾಯಕತ್ವಕ್ಕೆ ಬಾಬರ್ ಅಜಂ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಪಿಸಿಬಿ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದೇ ಕಾರಣಕ್ಕೆ ಆಟಗಾರಿಗೆ ಸಂಬಳವನ್ನು ನೀಡಲು ಸಾಧ್ಯವಾಗಿಲ್ಲ. ಆಟಗಾರರ ಜರ್ಸಿಯಲ್ಲಿ ಪ್ರಾಯೋಜಕತ್ವದ ಲೋಗೋಗೆ ಸಂಬಂಧಿಸಿದ ಬಾಕಿ ಮೊತ್ತವನ್ನೂ ಪಾವತಿಸಿಲ್ಲ.

