Bengaluru 24°C
Ad

ಬ್ಯಾಡ್ಮಿಂಟನ್‌ ಟೂರ್ನಿ: ಫೈನಲ್‌ಗೆ ಲಗ್ಗೆಯಿಟ್ಟ ಪಿ.ವಿ ಸಿಂಧು

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ ಸಿಂಧು ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ ಸಿಂಧು ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಶನಿವಾರ ಕೌಲಾಲಂಪುರದಲ್ಲಿ ನಡೆದ ಟೂರ್ನಿಯಲ್ಲಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನ ಸೋಲಿಸಿದ್ದಾರೆ.

88 ನಿಮಿಷಗಳ ಕಾಲ ನಡೆದ ಜಿದ್ದಾ-ಜಿದ್ದಿ ಹೋರಾಟದಲ್ಲಿ ವಿಶ್ವದ 20ನೇ ಶ್ರೇಯಾಂಕಿತ ಬುಸಾನನ್ ವಿರುದ್ಧ 13-21 21-16 21-12 ಅಂಕಗಳೊಂದಿಗೆ ಗೆಲುವು ಸಾಧಿಸಿ ಮೈಲುಗಲ್ಲು ಸಾಧಿಸಿದ್ದಾರೆ.

2019ರ ಹಾಂಗ್‌ ಕಾಂಗ್‌ ಓಪನ್ಸ್‌ನಲ್ಲಿ ತಮ್ಮ ವೃತ್ತಿ ಬದುಕಿನಲ್ಲಿ ಮೊದಲಬಾರಿಗೆ ಭಾರತೀಯರನ್ನು ಸೋಲಿಸಿದ್ದ ಥಾಯ್ಲೆಂಡ್‌ನ ಬುಸಾನನ್ ವಿರುದ್ಧ ಇದು ಸಿಂಧು ಅವರ 18ನೇ ಜಯವಾಗಿದೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಪಿ.ವಿ ಸಿಂಧು ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

Ad
Ad
Nk Channel Final 21 09 2023
Ad