ಢಾಕಾ: ಬಾಂಗ್ಲಾದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ತಿಳಿಸಿರುವ ಅವರು, ಮಿರ್ಪುರದಲ್ಲಿ ತಮ್ಮ ತವರು ಪ್ರೇಕ್ಷಕರ ಮುಂದೆ ವಿದಾಯ ಪಂದ್ಯವನ್ನು ಆಡುವ ತಮ್ಮ ಮನವಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಒಪ್ಪಿಗೆ ನೀಡದಿದ್ದರೆ ಭಾರತ ಹಾಗೂ ಬಾನ್ ಕಾನ್ಪುರ ಟೆಸ್ಟ್ ತಮ್ಮ ಕೊನೆಯ ಪಂದ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಶಕೀಬ್ ಅಂತಾರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
Ad