ಮುಂಬೈ: 2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.

2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಜಯಗಳಿಸಿದ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಟ್ರೋಫಿಯನ್ನು ಎತ್ತಿಹಿಡಿಯಿತು. ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿತು.

ಸತತ 2ನೇ ಬಾರಿಗೆ ಐಸಿಸಿ ಪುರುಷರ ಟಿ20 ವಿಶ್ವಕಪ್ ಅನ್ನು ಉಳಿಸಿಕೊಂಡ ಮೊದಲ ತಂಡವಾಯಿತು. ಈ ಗೆಲುವಿನೊಂದಿಗೆ, ಭಾರತವು ಐಸಿಸಿ ಪುರುಷರ ಟಿ20 ವಿಶ್ವಕಪ್ ಅನ್ನು ಮೂರು ಬಾರಿ ಗೆದ್ದ ಮೊದಲ ತಂಡವಾಯಿತು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.