News Karnataka Kannada
Friday, May 03 2024
ಕ್ರೀಡೆ

ಏಕದಿನ ವಿಶ್ವಕಪ್‌ಗಾಗಿ ಕ್ರಿಕೆಟ್ ದೇವರಿಗೆ ಗೋಲ್ಡನ್ ಟಿಕೆಟ್ ನೀಡಿದ ಬಿಸಿಸಿಐ

BCCI gives golden ticket to god of cricket for ODI World Cup
Photo Credit : Twitter

ನವದೆಹಲಿ: ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ‘ಗೋಲ್ಡನ್ ಟಿಕೆಟ್’ ಅನ್ನು ಉಡುಗೊರೆಯಾಗಿ ನೀಡಿದರು.

ಸಚಿನ್ ತೆಂಡೂಲ್ಕರ್ ಅವರಿಗೆ ಶಾ ಗೋಲ್ಡನ್ ಟಿಕೆಟ್ ನೀಡುತ್ತಿರುವ ಫೋಟೋವನ್ನು ಬಿಸಿಸಿಐ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದೆ. ‘ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್’ ಕಾರ್ಯಕ್ರಮದ ಭಾಗವಾಗಿ, ವಿಶೇಷ ಪ್ರಸ್ತುತಿಯಲ್ಲಿ ತೆಂಡೂಲ್ಕರ್ ‘ಗೋಲ್ಡನ್ ಟಿಕೆಟ್’ ಸ್ವೀಕರಿಸಿದರು.

ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಆರಂಭವಾಗುತ್ತಿದೆ. ಕ್ರಿಕೆಟ್​ನ ಈ ಮಹಾ ಸಂಭ್ರಮಕ್ಕೆ ಬಿಸಿಸಿಐ ಎಲ್ಲಾ ರೀತಿಯ ತಯಾರಿಯಲ್ಲಿ ನಿರತವಾಗಿದೆ. ಈ ವಿಶ್ವ ಸಮರ ಭಾರತದ 10 ಸ್ಥಳಗಳಲ್ಲಿ ನಡೆಯಲ್ಲಿದ್ದು, ಈ ಐಸಿಸಿ ಈವೆಂಟ್​ನಲ್ಲಿ 10 ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಈ ವಿಶ್ವಕಪ್​ಗೆ ಆತಿಥ್ಯವಹಿಸುತ್ತಿದೆ.

ಹೀಗಾಗಿ ಈ ಪಂದ್ಯಾವಳಿಯನ್ನು ಸ್ಮರಣೀಯಗೊಳಿಸುವ ಸಲುವಾಗಿ ಬಿಸಿಸಿಐ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಅದರಲ್ಲಿ ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯೂ ಒಂದಾಗಿದ್ದು, ಈ ಯೋಜನೆಯಡಿಯಲ್ಲಿ ಭಾರತದ ಹಲವು ಸಾಧಕರಿಗೆ ಈ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ.

ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಈ ಗೋಲ್ಡನ್ ಟಿಕೆಟ್ ನೀಡಿದ್ದ ಬಿಸಿಸಿಐ, ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್​ಗೆ ಆಹ್ವಾನ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು