Bengaluru 24°C
Ad

ಬಿಸಿಸಿಐ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಿಗೆ ಯಾವುದೇ ಆಫರ್‌ ನೀಡಿಲ್ಲ: ಜಯ್‌ಶಾ

ಟೀಂ ಇಂಡಿಯಾದ ಕೋಚ್‌ ಹುದ್ದೆಗೆ ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಿಗೆ ಯಾವುದೇ ಆಫರ್‌ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ ಹೇಳಿದ್ದಾರೆ.

ಮುಂಬೈ: ಟೀಂ ಇಂಡಿಯಾದ ಕೋಚ್‌ ಹುದ್ದೆಗೆ ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಿಗೆ ಯಾವುದೇ ಆಫರ್‌ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ ಹೇಳಿದ್ದಾರೆ.

ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ಮತ್ತು ಶ್ರೇಯಾಂಕಗಳ ಮೂಲಕ ಏರಿದ ವ್ಯಕ್ತಿಗಳನ್ನು ಆಯ್ಕೆ ಮಾಡಲು ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ನಮ್ಮ ಕೋಚ್ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದಿದ್ದಾರೆ.

ನವೆಂಬರ್‌ 2021 ರಿಂದ ದ್ರಾವಿಡ್‌ ಕೋಚ್‌ ಹುದ್ದೆಯನ್ನು ಅಲಂಕರಿಸಿದ್ದು ಜೂನ್‌ನಲ್ಲಿ ಅವಧಿ ಅಂತ್ಯವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದೆ.

ಈ ಕಾರಣಕ್ಕೆ ಬಿಸಿಸಿಐ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಮೇ 27 ರಂದು ಸಂಜೆ 6 ಗಂಟೆಯ ಒಳಗಡೆ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಬೇಕೆಂದು ಬಿಸಿಸಿಐ ಜಾಹೀರಾತು ಪ್ರಕಟಿಸಿದೆ.

Ad
Ad
Nk Channel Final 21 09 2023
Ad