ಮುಂಬೈ: ಭಾರತ ತಂಡದ ಅತ್ಯಂತ ಶ್ರೇಷ್ಠ ನಾಯಕ ಎಂಎಸ್ ಧೋನಿಯ ಜೆರ್ಸಿ ನಂಬರ್-7ಅನ್ನು ನಿವೃತ್ತಿಗೊಳಿಸಲು ಬಿಸಿಸಿಐ ನಿರ್ಧರಿಸಿದೆ.
ಧೋನಿ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಮಾತ್ರ ಆಡುತ್ತಿದ್ದಾರೆ. ಇದೀಗ ಧೋನಿ ನಿವೃತ್ತಿಯಾದ ಮೂರು ವರ್ಷಗಳ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಬಿಸಿಸಿಐ ಆಟಗಾರರೊಬ್ಬರ ಜರ್ಸಿಯನ್ನು ನಿವೃತ್ತಿಗೊಳಿಸಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಭಾರತದ ಶ್ರೇಷ್ಠ ಬ್ಯಾಟರ್ ಸಚಿನ್ ತೆಂಡೂಲ್ಕರ್ ಜೆರ್ಸಿ ನಂಬರ್ 10ನ್ನು ಕೂಡ ಬಿಸಿಸಿಐ ನಿವೃತ್ತಿಗೊಳಿಸಿದೆ.
ಕ್ರಿಕೆಟ್ ಲೋಕದಲ್ಲಿ ಧೋನಿ ಜೊತೆಗೆ ಅವರ ಜೆರ್ಸಿ ಸಂಖ್ಯೆ 7 ಕೂಡ ಅಷ್ಟೇ ಹೆಸರುವಾಸಿಯಾಗಿದೆ.
ಇನ್ನುಮುಂದೆ ಟೀಮ್ ಇಂಡಿಯಾದಲ್ಲಿರುವಾಗ ಆಟಗಾರರು ನಂಬರ್-7 ಜರ್ಸಿಯನ್ನು ಧರಿಸುವಂತಿಲ್ಲ ಎಂದು ಬಿಸಿಸಿಐ ಸ್ಪಷ್ಟವಾಗಿ ಹೇಳಿದೆ.