Categories: ಕ್ರೀಡೆ

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ತೆಗೆ ದಾಖಲಾಗಿದ್ದರು. ಆದರೆ ಬುಧವಾರ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದವರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತರುವಲ್ಲಿ ಇವರ ಕೊಡುಗೆ ಅಪಾರ.

ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ  ರಾಜ್ಯ ದ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು. ಅವರ ಸಾಧನೆಯ ಹಿಂದೆ ತರಬೇತುದಾರರಾದ ಉಜಿರೆ ಎಸ್.ಡಿ.ಎಂ. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಅವರ ಶ್ರಮ ಅಪಾರವಿದೆ.

ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ. ಅವರ ಸಾಧನೆಯನ್ನು ಮೆಚ್ಚಿ ಧರ್ಮಸ್ಥಳ ಧರ್ಮಾಧಿಕಾರಿ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಶಂಸಿ ಗೌರವಿಸಿದ್ದರು.

ಅವರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.

Sneha Gowda

Recent Posts

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತಿಗೆ ಥಳಿತ

ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ…

7 mins ago

ಆನ್‌ಲೈನ್ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ

ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ…

18 mins ago

ಯುನಿಸೆಫ್ ಇಂಡಿಯಾʼಗೆ ಕರೀನಾ ಕಪೂರ್ ರಾಯಭಾರಿ

ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ…

28 mins ago

ಶಂಕರ್‌ನಾಗ್ ಹೆಸರಿನಲ್ಲಿ ಮಹತ್ವದ ಘೋಷಣೆ ಮಾಡಲಿದೆ ಕರ್ನಾಟಕ ಸರ್ಕಾರ

ನಟ, ನಿರ್ದೇಶಕ ಶಂಕರ್ ನಾಗ್ ನಮ್ಮನ್ನು ಅಗಲಿ ದಶಕಗಳೇ ಕಳೆದರೂ ಕೂಡ ಅವರ ನೆನಪು ಸದಾ ಕನ್ನಡಿಗರ ಮನದಲ್ಲಿ ಹಸಿರಾಗಿರುತ್ತದೆ.…

32 mins ago

ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿ: ಭಾರೀ ಪ್ರಮಾಣದ ಪೆಟ್ರೋಲ್ ಸೋರಿಕೆ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದೆ.

42 mins ago

ರೇವಣ್ಣ ವಿರುದ್ಧದ ಕಿಡ್ನ್ಯಾಪ್​ ಕೇಸ್​: ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​ ಆರೋಪ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಬಂಧನವಾಗಿದೆ. ಎಸ್​ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾ| ಕಾಳೇನಹಳ್ಳಿಯಲ್ಲಿ ಸಂತ್ರಸ್ತ…

47 mins ago