Categories: ಕ್ರೀಡೆ

ಬೆಳ್ತಂಗಡಿ: ಪ್ರತಿಭಾ ಪ್ರೋತ್ಸಾಹ, ಸಮುದಾಯದ ಒಗ್ಗಟ್ಟಿಗೆ ಕ್ರೀಡಾಕೂಟಗಳು ಸಹಕಾರಿ

ಬೆಳ್ತಂಗಡಿ: ಸಮುದಾಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಸಮುದಾಯದ ಒಗ್ಗಟ್ಟಿಗೆ ಕ್ರೀಡಾಕೂಟದಂತಹ ಕಾರ್ಯಕ್ರಮಗಳು ಪ್ರಯೋಜನಕಾರಿಯಾಗಿವೆ. ನಮ್ಮ ಸಮುದಾಯಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸಂಘದ ವತಿಯಿಂದ ಸಾಧ್ಯವಾದಷ್ಟು ಪ್ರಯತ್ನಿಸಲಾಗುತ್ತಿದೆ ಎಂದು ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಎಳನೀರು  ಹೇಳಿದರು.

ಮಲೆಕುಡಿಯರ ಸಂಘ ರಿ. ದ.ಕ. ಜಿಲ್ಲಾ ಸಮಿತಿಯ ವಾರ್ಷಿಕ ಸಮಾವೇಶ ಪ್ರಯುಕ್ತ ಬೆಳ್ತಂಗಡಿ, ಲಾಯಿಲ ಪಡ್ಲಾಡಿ ಹಿ.ಪ್ರಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಲೆಕುಡಿಯರ ಮುಕ್ತ ಕ್ರೀಡಾಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾ. ೪ರಂದು ಬೆಳ್ತಂಗಡಿ ಕೊಯ್ಯೂರು-ಶಿವಗಿರಿಯಲ್ಲಿರುವ ಮಲೆಕುಡಿಯರ ಸಭಾಭವನದಲ್ಲಿ ವಾರ್ಷಿಕ ಸಮಾವೇಶ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಪ್ರತಿನಿಧಿಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಪ್ರಯುಕ್ತವಾಗಿ ಕ್ರೀಡಾಕೂಟವನ್ನು ಹಮ್ಮಿಕೊಂಡು ಸಮುದಾಯದ ಕ್ರೀಡಾಸ್ಫೂರ್ತಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.

ಕ್ರೀಡಾಕೂಟವನ್ನು ಲಾಯಿಲ ಕೆದ್ದೇಲು ಮನೆಯ ಸುಂದರ ಎಂ.ಕೆ  ಉದ್ಘಾಟಿಸಿದರು. ಮಲೆಕುಡಿಯರ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಸಿ ಉಜಿರೆ, ಉಡುಪಿ ಜಿಲ್ಲಾ ಮಲೆಕುಡಿಯರ ಸಂಘದ ಅಧ್ಯಕ್ಷ ಗಂಗಾಧರ್ ಈದು, ಪಡ್ಲಾಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸೂರಪ್ಪ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಲಾಯಿಲ ಗ್ರಾ. ಪಂ. ಸದಸ್ಯೆ ಶ್ರೀಮತಿ ಜಯಂತಿ, ರಾಜ್ಯ ಮಲೆಕುಡಿಯ ಸಂಘದ ಜೊತೆ ಕಾರ್ಯದರ್ಶಿ ಜಯರಾಮ ಆಲಂಗಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯೇಂದ್ರ ಎಂ. ನಿಡ್ಲೆ ಸ್ವಾಗತಿ, ತಾಲೂಕು ಸಮಿತಿಯ ಸುಂದರ ಶಿಶಿಲ ವಂದಿಸಿದರು. ರಾಜ್ಯ ಮಲೆಕುಡಿಯ ಸಂಘದ ಪ್ರ.ಕಾರ್ಯದರ್ಶಿ ಬಾಲಕೃಷ್ಣ ಪೊಳಲಿ ಕಾರ್ಯಕ್ರಮ ನಿರೂಪಿಸಿದರು.

ಪುರುಷರ ವಾಲಿಬಾಲ್

ಪ್ರಥಮ- ಎಂ.ಕೆ. ಗಯ್ಸ್ ಬಂಟ್ವಾಳ
ದ್ವಿತೀಯ- ಸೆವೆನ್ ಸ್ಟಾರ್ ಸವಣಾಲ್ ಎ
ಬೆಸ್ಟ್ ಅಟ್ಯಾಕರ್- ಮಾಧವ ಸವಣಾಲ್
ಬೆಸ್ಟ್ ಪಾಸರ್- ಸುಮಂತ್ ಬಂಟ್ವಾಳ
ಅಲ್ ರೌಂಡರ್- ಮೋಹನ್ ಬಂಟ್ವಾಳ
ಮಹಿಳೆಯರ ತ್ರೋಬಾಲ್
ಪ್ರಥಮ- ಸೆವೆನ್ ಸ್ಟಾರ್ ಸವಣಾಲ್
ದ್ವಿತೀಯ- ಫ್ರೆಂಡ್ಸ್ ನಿಡ್ಲೆ
ಉತ್ತಮ ಎಸೆತಗಾರ್ತಿ- ಮಾನ್ಯತ

ಉತ್ತಮ ಆಲ್ ರೌಂಡರ್- ಭವ್ಯ
ಪುರುಷರ ಹಗ್ಗ ಜಗ್ಗಾಟ
ಪ್ರಥಮ -ಉಡುಪಿ ಮಲೆಕುಡಿಯ ಫ್ರೆಂಡ್ಸ್ ಬಿ
ದ್ವಿತೀಯ -ವೀರಾಂಜನೇಯ ಕಾಸರಗೋಡು ಎ
ಮಹಿಳೆಯರ ಹಗ್ಗ-ಜಗ್ಗಾಟ
ಪ್ರಥಮ- ಯುವಶಕ್ತಿ ಆಲಂಗಾಯಿ
ದ್ವಿತೀಯ- ವನಶ್ರೀ ಕುತ್ಲೂರು

Sneha Gowda

Recent Posts

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

7 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

21 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

37 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

1 hour ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 hour ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago