News Karnataka Kannada
Sunday, May 12 2024
ಕ್ರೀಡೆ

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದ ಬೆನ್ ಸ್ಟೋಕ್ಸ್

ben-stokes-creates
Photo Credit : By Author

 ಮ್ಯಾಂಚೆಸ್ಟರ್​: ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೂಲಕ ಬೆನ್ ಸ್ಟೋಕ್ಸ್​ ಹೊಸ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆನ್ ಸ್ಟೋಕ್ಸ್ 67 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 42 ರನ್ ಬಾರಿಸಿದ್ದರು. ಈ ಒಂದು ಸಿಕ್ಸ್​ನೊಂದಿಗೆ ಆ್ಯಶಸ್ ಸರಣಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆ ಬೆನ್ ಸ್ಟೋಕ್ಸ್ ಪಾಲಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಬ್ಯಾಟರ್ ಕೆವಿನ್ ಪೀಟರ್ಸನ್ ಹೆಸರಿನಲ್ಲಿತ್ತು. 2005 ರ ಆ್ಯಶಸ್ ಸರಣಿಯಲ್ಲಿ ಪೀಟರ್ಸನ್ ಬರೋಬ್ಬರಿ 14 ಸಿಕ್ಸ್​ಗಳನ್ನು ಸಿಡಿಸಿದ್ದರು.

ಇದೀಗ ಈ ಬಾರಿಯ ಆ್ಯಶಸ್ ಸರಣಿಯ 5 ಪಂದ್ಯಗಳಲ್ಲಿ ಸ್ಟೋಕ್ಸ್ ಒಟ್ಟು 15 ಸಿಕ್ಸ್​ ಸಿಡಿಸಿದ್ದಾರೆ. ಈ ಮೂಲಕ ಆ್ಯಶಸ್ ಸರಣಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆಯನ್ನು ಬೆನ್ ಸ್ಟೋಕ್ಸ್ ತಮ್ಮದಾಗಿಸಿಕೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು