News Karnataka Kannada
Friday, May 10 2024
ಕ್ರೀಡೆ

ಐತಿಹಾಸಿಕ ಸಾಧನೆ: ಫೆನ್ಸಿಂಗ್​ನಲ್ಲಿ ಭಾರತಕ್ಕೆ ಮೊದಲ ಪದಕ

bhavani-devi
Photo Credit : Twitter

ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪೆನ್ಸರ್ ಭವಾನಿ ದೇವಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಕ್ವಾರ್ಟರ್‌ಫೈನಲ್‌ನಲ್ಲಿ ಸೋಲಿಸಿ ಭವಾನಿ ದೇವಿ ಫೆನ್ಸಿಂಗ್‌ನಲ್ಲಿ (ಕತ್ತಿ ವರಸೆ) ಭಾರತಕ್ಕೆ ಮೊದಲ ಕಂಚಿನ ಪದಕ ತಂದುಕೊಟ್ಟಿದ್ದಾರೆ. ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ಎಮುರಾ ಅವರನ್ನು 15-10 ಅಂಕಗಳಿಂದ ಸೋಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದ ಭವಾನಿ ದೇವಿ ಸೆಮಿಫೈನಲ್ ಪ್ರವೇಶಿಸಿದ್ದರು.

ಆದರೆ ಸೆಮಿಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಝೈನಾಬ್ ದೈಬೆಕೋವಾ ವಿರುದ್ಧ ಭವಾನಿ 14-15 ಅಂತರದಿಂದ ಸೋಲನುಭವಿಸಿದರು. ಇದಾಗ್ಯೂ ಮೂರನೇ ಸ್ಥಾನ ಪಡೆಯುವ ಮೂಲಕ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆ ಬರೆದರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು