ಬೀದರ್: ಮುಂಬರುವ ದಿನಗಳಲ್ಲಿ ಕುಸ್ತಿ ಉತ್ಸವ ಅದ್ದೂರಿಯಾಗಿ ಆಯೋಜಿಸಲಾಗುವದು: ಶರಣು ಸಲಗರ

ಬೀದರ್,ಮಾ.12: ಮೊದಲ ಸಲ ಕುಸ್ತಿ ಉತ್ಸವ ಬಸವ ಉತ್ಸವದಲ್ಲಿ ಆಯೋಜಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನು ಅದ್ದೂರಿಯಾಗಿ ಆಯೋಜಿಸಲಾಗುತ್ತದೆ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಹೇಳಿದರು.

ಅವರು ರವಿವಾರ ಬಸವ ಉತ್ಸವ-2023 ಅಂಗವಾಗಿ ಬಸವಕಲ್ಯಾಣದ ಥೇರ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕುಸ್ತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಸವ ಉತ್ಸವದಲ್ಲಿ ಮೊದಲ ಬಾರಿಗೆ ಕುಸ್ತಿ ಉತ್ಸವ, ಹೆಲಿಕಾಪ್ಟರ್ ಉತ್ಸವ ಮತ್ತು ಬೋಟಿಂಗ್ ಉತ್ಸವವನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಇವುಗಳ ಆನಂದವನ್ನು ಸವಿಯಬೇಕು ಮತ್ತು ಇದರ ಹೊರತಾಗಿ ಇತರೆ ಹಲವಾರು ಉತ್ಸವಗಳನ್ನು ಆಯೋಜಿಸಲಾಗಿದೆ. ಇಂದು ಸಂಜೆಯು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಹೆಚ್ಚಿನ ಜನರು ಇದರಲ್ಲಿ ಭಾಗವಹಿಸಬೇಕೆಂದು ಹೇಳಿದರು.

ಈ ಕುಸ್ತಿ ಉತ್ಸವದಲ್ಲಿ ಸೌತ್ ಎಷಿಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಾದ ಬಸವಕಲ್ಯಾಣದ ಕೊಹಿನೂರ್ ಗ್ರಾಮದ ಅಂತರಾಷ್ಟ್ರೀಯ ಕುಸ್ತಿ ಕ್ರೀಡಾಪಟು ಉಮೇಶ್ ಜಮಾದಾರ ಹಾಗೂ ಅನೇಕ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಕುಸ್ತಿಪಟುಗಳು ಸೇರಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಸುಮಾರ 100ಕ್ಕೂ ಹೆಚ್ಚು ಕುಸ್ತಿ ಪಟುಗಳು ಈ ಕುಸ್ತಿ ಉತ್ಸವದಲ್ಲಿ ಭಾಗವಹಿದರು.

ಪ್ರಥಮ ಬಹುಮಾನ 51 ಸಾವಿರ ರೂಪಾಯಿ ಜೊತೆಗೆ ಬೆಳ್ಳಿ ಗಧೆಯನ್ನು ಸಿದ್ದು ಬೆಳಮಗಿ ಅವರು ವಿಜೇತರಾಗುವ ಮೂಲಕ ಪಡೆದರು, 11 ಸಾವಿರ ವಿಭಾಗದಲ್ಲಿ ಉಮೇಶ್ ಜಮಾದಾರ ಅವರು ಬಹುಮಾನ ಪಡೆದರು. 8 ಮತ್ತು 10 ಸಾವಿರ ರೂಪಾಯಿಗಳ ಬಹುಮಾನಗಳನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ಕೆಲವೊಂದು ಕುಸ್ತಿ ಪಟುಗಳು ಹಲವಾರು ನಿಮಿಷಗಳ ಕಾಲ ಸಮಬಲ ಪ್ರದರ್ಶಿಸುವ ಮೂಲಕ ಪ್ರೇಕ್ಷಕರನ್ನು ಕಾತುರದಿಂದ ಕಾಯುವಂತೆ ಮಾಡಿದರು. ಕೆಲವು ಕುಸ್ತಿ ಪಟುಗಳು ಕೆಲವೇ ನಿಮಿಷಗಳಲ್ಲಿ ಎದುರಾಳಿಯನ್ನು ಚಿತ್ತು ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಒಟ್ಟಾರೆಯಾಗಿ ವಿವಿಧ ಆಕರ್ಷಕ ಮೈಕಟ್ಟು ಮತ್ತು ದೇಹಧಾಡ್ಯ ಹೊಂದಿರುವ ಕುಸ್ತಿ ಪಟುಗಳು ಕುಸ್ತಿ ಅಭಿಮಾನಿಗಳಲ್ಲಿ ಸಂತಸವನ್ನುಂಟು ಮಾಡಿದರು.

ಈ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರಾದ ರಮೇಶ ಕೋಲಾರ, ಬಸವಕಲ್ಯಾಣ ತಹಸೀಲ್ದಾರ ಶಾಂತಗೌಡ ಬಿರಾದಾರ, ಬಸವಕಲ್ಯಾಣ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ.ಹಳ್ಳದ ಸೇರಿದಂತೆ ವಿವಿಧ ಕಡೆಯಿಂದ ಆಗಮಿಸಿದ ಕುಸ್ತಿಪಟುಗಳು, ಕುಸ್ತಿ ಅಭಿಮಾನಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago