ಮುಂಬೈ: ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ಆರ್ಸಿಬಿ ತಂಡದ ಮೆಂಟರ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ದಿನೇಶ್ ಕಾರ್ತಿಕ್ ಅವರನ್ನು ನೇಮಿಸಿದೆ. ಈ ಮಧ್ಯೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಆರ್ಸಿಬಿಗೆ ಎಂಟ್ರಿ ಆಗೋ ಸೂಚನೆ ಸಿಕ್ಕಿದೆ.
ಮೆಗಾ ಆಕ್ಷನ್ನಲ್ಲಿ ತಮಗೆ ಬೇಕಾದ ಆಟಗಾರರನ್ನು ಖರೀದಿ ಮಾಡಲು ಆರ್ಸಿಬಿ ಮುಂದಾಗಿದೆ. ಕ್ವಾಲಿಟಿ ಆಟಾಗರರ ಖರೀದಿ ಮಾಡಿ ಬಲಿಷ್ಠ ತಂಡ ಕಟ್ಟು ಪ್ಲಾನ್ ಆರ್ಸಿಬಿಯದ್ದು. ಹಾಗಾಗಿ ಕೆ.ಎಲ್ ರಾಹುಲ್ ಅವರ ಮೇಲೆ ಆರ್ಸಿಬಿ ಕಣ್ಣಿಟ್ಟಿದೆ.
ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡ ತೊರೆದು ಕೆ.ಎಲ್ ರಾಹುಲ್ ಆರ್ಸಿಬಿ ಸೇರೋದು ಪಕ್ಕಾ ಆಗಿದೆ. ಈ ಬಗ್ಗೆ ಕೆ.ಎಲ್ ರಾಹುಲ್ ಬಹಿರಂಗ ಹೇಳಿಕೆ ನೀಡಿರುವ ಹೇಳಿಕೆ ಕೂಡ ಎಲ್ಲೆಡೆ ಹರಿದಾಡುತ್ತಿದೆ. ಅಷ್ಟೇ ಅಲ್ಲ ರಾಷ್ಟ್ರೀಯ ಮಾಧ್ಯಮಗಳಲ್ಲೂ ಕೆ.ಎಲ್ ರಾಹುಲ್ ಆರ್ಸಿಬಿ ಸೇರುವ ಬಗ್ಗೆ ವರದಿಯಾಗಿದೆ.
ಈ ಮಧ್ಯೆ ಕೆ.ಎಲ್ ರಾಹುಲ್ ಫ್ಯಾನ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಷಿಯಲ್ ಮೀಡಿಯಾ ಖಾತೆಯನ್ನು ಅನ್ಫಾಲೋ ಮಾಡುತ್ತಿದ್ದಾರೆ. ಹೀಗಾಗಿ ಆರ್ಸಿಬಿ ಬರೋದು ಪಕ್ಕಾ ಎಂದು ಫ್ಯಾನ್ಸ್ ಕೂಡ ಹೇಳುತ್ತಿದ್ದಾರೆ.

