ಬೆನೋನಿ: ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 2 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೀಂ ಇಂಡಿಯಾ ಫೈನಲ್ ಗೆ ಪ್ರವೇಶ ಮಾಡಿದೆ.
ಈ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಇನ್ನು 7 ಎಸೆತಗಳನ್ನು ಉಳಿಸಿಕೊಂಡು 245 ರನ್ ಬಾರಿಸಿ ಭರ್ಜರಿ ಜಯ ಗಳಿಸಿದೆ.