ಆರ್ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಕೃಷ್ಣಕುಮಾರ್ ದಿನೇಶ್ ಕಾರ್ತಿಕ್ ಅವರು ಇಂದು 39ನೇ ವರ್ಷಕ್ಕೆ ಕಾಲಿಟ್ಟರೆ, ರಜತ್ ಪಾಟಿದಾರ್ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಇಬ್ಬರು ಆಟಗಾರರು ಒಂದೇ ದಿನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಆರ್ಸಿಬಿ ಅಭಿಮಾನಿಗಳು ಜನ್ಮದಿನ ಶುಭ ಕೋರುತ್ತಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ರಜತ್ ಪಾಟಿದಾರ್ ಹಾಗೂ ದಿನೇಶ್ ಕಾರ್ತಿಕ್ ಆರ್ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 15 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಪಾಟಿದಾರ್ 5 ಅರ್ಧಶತಕಗಳೊಂದಿಗೆ 395 ರನ್ ಬಾರಿಸಿ ಮಿಂಚಿದ್ದರು.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದ ಬಳಿಕ ಡಿಕೆ ತಮ್ಮ ನಿವೃತ್ತಿಯನ್ನು ಘೋಷಿಸಿದ್ದು, ಹೀಗಾಗಿ ಮುಂದಿನ ಸೀಸನ್ನಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದಿಲ್ಲ.
ಐಪಿಎಲ್ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ.
It’s a double birthday bash for our boys! 🎂🥳
Join us in wishing our Dependables Dinesh Karthik and Rajat Patidar the happiest of birthdays! 😎💯#PlayBold #ನಮ್ಮRCB pic.twitter.com/AnRV66L9pm
— Royal Challengers Bengaluru (@RCBTweets) June 1, 2024