Ad

ಐಸಿಸಿಯಿಂದ ವಿಶೇಷ ಗೌರವಕ್ಕೆ ಭಾಜನರಾದ ಜಸ್ಪ್ರೀತ್ ಬುಮ್ರಾ, ಸ್ಮೃತಿ ಮಂಧಾನ

Award

2024ರ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಐಸಿಸಿ ಜೂನ್ ತಿಂಗಳ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸ್ಮೃತಿ ಮಂಧಾನ ಅವರಿಗೂ ಈ ಪ್ರಶಸ್ತಿ ಲಭಿಸಿದೆ.

Ad
300x250 2

ಹೌದು. .2024ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಪ್ರದರ್ಶನಕ್ಕಾಗಿ ಐಸಿಸಿಯಿಂದ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು ಸಹ ಪಡೆದರು. ಇದೀಗ ಬುಮ್ರಾ, ಐಸಿಸಿ ಜೂನ್ ತಿಂಗಳ ಆಟಗಾರ ಗೌರವಕ್ಕೆ ಭಾಜನರಾಗಿದ್ದಾರೆ.

ಈ ಮೂಲಕ ಬುಮ್ರಾ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಬುಮ್ರಾಗೂ ಮೊದಲು ಈ ಗೌರವವನ್ನು ಭುವನೇಶ್ವರ್ ಕುಮಾರ್ ಸ್ವೀಕರಿಸಿದ್ದರು. ಅವರಿಗೆ ಜನವರಿ 2021 ರಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಹೆಸರೂ ಸೇರಿಕೊಂಡಿದೆ.

ಪ್ರಶಸ್ತಿ ಗೆದ್ದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿರುವ ಜಸ್ಪ್ರೀತ್ ಬುಮ್ರಾ, ‘ಈ ಪ್ರಶಸ್ತಿ ಗೆದ್ದಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನನಗೆ ಅದೃಷ್ಟದ ವಿಷಯವಾಗಿದ್ದು, ಕೆಲವು ವಾರಗಳು ನನಗೆ ಬಹಳ ಸ್ಮರಣೀಯವಾಗಿವೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡಿ ಟ್ರೋಫಿ ಎತ್ತಿ ಹಿಡಿದಿದ್ದು ವಿಶೇಷವಾಗಿತ್ತು ಎಂದಿದ್ದಾರೆ.

ಇವರಲ್ಲದೆ ಸ್ಮೃತಿ ಮಂಧಾನ ಕೂಡ ಈ ಗೌರವಕ್ಕೆ ಭಾಜನರಾಗಿದ್ದಾರೆ. ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಂಧಾನಾಗೆ ಐಸಿಸಿ ಜೂನ್ ತಿಂಗಳ ಆಟಗಾರ್ತಿ ಪ್ರಶಸ್ತಿ ನೀಡಿ ಗೌರವಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಅವರ ಪ್ರದರ್ಶನಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.

 

Ad
Ad
Nk Channel Final 21 09 2023
Ad