Bengaluru 22°C
Ad

ಜಮ್ಮು-ಕಾಶ್ಮೀರದಲ್ಲಿ ಅಭಿಮಾನಿಗಳಿಂದ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಾಚರಣೆ

17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ.

ಜಮ್ಮಕಾಶ್ಮೀರ: 17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

Ad
300x250 2

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ.

ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

 

Ad
Ad
Nk Channel Final 21 09 2023
Ad