Categories: ಕ್ರೀಡೆ

“ಆನಂದ.. ಪರಮಾನಂದ”: ಆರ್‌ಸಿಬಿ ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಚಹಲ್

ದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಬಗ್ಗು ಬಡಿದು ಆರ್‌ಸಿಬಿ ಕಿರೀಟ ಮುಡಿಗೇರಿಸಿಕೊಂಡಿದೆ.

ಇತ್ತ ಆರ್​ಸಿಬಿ ತಂಡ ಗೆಲ್ಲುತ್ತಿದ್ದಂತೆ, ಅತ್ತ ಸಂಭ್ರಮಿಸಿದವರಲ್ಲಿ ಯುಜ್ವೇಂದ್ರ ಚಹಲ್ ಕೂಡ ಒಬ್ಬರು. ಆದರೆ ಚಹಲ್ ಅವರದ್ದು ಕೇವಲ ಸಂಭ್ರಮವಾಗಿರಲಿಲ್ಲ. ಅದು ಪರಮಾನಂದವಾಗಿತ್ತು. ಇದನ್ನು ಟೀಮ್ ಇಂಡಿಯಾ ಆಟಗಾರ ಕನ್ನಡದಲ್ಲೇ ತಿಳಿಸಿದ್ದು ವಿಶೇಷ.

ಹೌದು, ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಯುಜ್ವೇಂದ್ರ ಚಹಲ್ ತಮ್ಮ ಎಕ್ಸ್ ಖಾತೆಯಲ್ಲಿ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ಕನ್ನಡದಲ್ಲೇ “ಆನಂದ.. ಪರಮಾನಂದ…. ಪರಮಾನಂದ….” ಎಂದು ಬರೆದುಕೊಳ್ಳುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದರು. ಮಾಜಿ ಆರ್​ಸಿಬಿ ಆಟಗಾರನ ಅಭಿಮಾನಕ್ಕೆ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯುಜ್ವೇಂದ್ರ ಚಹಲ್ 2014 ರಿಂದ 2021 ರವರೆಗೆ ಆರ್​ಸಿಬಿ ಪರ ಆಡಿದ್ದರು. 7 ಸೀಸನ್​ಗಳಲ್ಲಿ 50 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಚಹಲ್ ಒಟ್ಟು 64 ವಿಕೆಟ್ ಪಡೆದಿದ್ದರು.  ಆದರೆ ಐಪಿಎಲ್​ 2022 ರಲ್ಲಿ ಚಹಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು. ಇದೀಗ ಯುಜ್ವೇಂದ್ರ ಚಹಲ್ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ.

Ashitha S

Recent Posts

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

14 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

20 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

46 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

48 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

1 hour ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago