News Karnataka Kannada
Monday, April 29 2024
ಕ್ರೀಡೆ

ಹಾಸನ ಮೂಲದ ಚಾರ್ವಿಗೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ

ಬಟುಮಿಯಲ್ಲಿ ನಡೆದ 8 ವರ್ಷದ ಒಳಗಿನವರ ವಿಶ್ವ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಹಾಸನ ಮೂಲದ ಚಾರ್ವಿ ಎ. ಅವರು ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.
Photo Credit : News Kannada

ಹಾಸನ: ಬಟುಮಿಯಲ್ಲಿ ನಡೆದ 8 ವರ್ಷದ ಒಳಗಿನವರ ವಿಶ್ವ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಹಾಸನ ಮೂಲದ ಚಾರ್ವಿ ಎ. ಅವರು ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ಕು. ಚಾರ್ವಿ ಎ. ಅವರು , ಈ ಹಿಂದೆ, ಶ್ರೀಲಂಕಾದಲ್ಲಿ ನಡೆದ 2022 ರ ಚಾಂಪಿಯನ್​ಶಿಪ್​ನಲ್ಲಿ ಅಂಡರ್-8 ಕಾಮನ್ವೆಲ್ತ್ ಚೆಸ್ ಚಾಂಪಿಯನ್ ಪ್ರಶಸ್ತಿಯನ್ನು ಸಹ ಗೆದ್ದು ಬೀಗಿದ್ದರು. 2022 ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಏಷ್ಯನ್ ಯೂತ್ ಚೆಸ್ ಚಾಂಪಿಯನ್​ಶಿಪ್​ನಲ್ಲಿ ಐದು ಚಿನ್ನದ ಪದಕಗಳನ್ನು ಮತ್ತು ಒಂದು ಬೆಳ್ಳಿಯನ್ನು ಗೆದ್ದಿದ್ದಾರೆ.

2021-22ರಲ್ಲಿ ನಡೆದ ವಿವಿಧ ಚಾಂಪಿಯನ್​ಶಿಪ್​ನಲ್ಲಿ ಅಂಡರ್-7, ಅಂಡರ್-8 ಮತ್ತು ಅಂಡರ್-10 ರಾಷ್ಟ್ರೀಯ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಚಿಕ್ಕ ವಯಸ್ಸಿನಲ್ಲೇ ಹಲವಾರು ಪ್ರಶಸ್ತಿ ಮುಡಿಗೇರಿಸಿಕೊಂಡು ರಾಷ್ಟ್ರಮಟ್ಟದಲ್ಲಿ ತಮ್ಮ ಪ್ರಾಬಲ್ಯ ಸಾಬೀತು ಪಡಿಸಿದ್ದಾರೆ.

ಚಾರ್ವಿ ಪ್ರಸ್ತುತ 4 ಅಂತಾರಾಷ್ಟ್ರೀಯ, 3 ರಾಷ್ಟ್ರೀಯ ಪ್ರಶಸ್ತಿಗಳನ್ನು ಹೊಂದಿರುವುದು ಗಮನಾರ್ಹ ಸಾಧನೆಯಾಗಿದೆ.

2022 ರಲ್ಲಿ 6 ಪ್ರಶಸ್ತಿ ಗಳಿಸಿ ಕ್ರೀಡಾ ಜಗತ್ತಿನಲ್ಲಿ ದಾಖಲೆ ಮಾಡಿದರು. ಪ್ರಸ್ತುತ ಅಂಡರ್-8, ಅಂಡರ್-10ನ ಬಾಲಕಿಯರ ವಿಭಾಗದಲ್ಲಿ ಭಾರತದ ನಂ. 1 ಶ್ರೇಯಾಂಕದ ಚೆಸ್ ಆಟಗಾರ್ತಿ ಆಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು