News Karnataka Kannada
Saturday, May 04 2024
ಕ್ರೀಡೆ

ವಿಶ್ವಕಪ್ ಚೆಸ್ ಪಂದ್ಯಾವಳಿ: ಐತಿಹಾಸಿಕ ಸೆಮೀಸ್‌ಗೆ ಲಗ್ಗೆ ಇಟ್ಟ ಪ್ರಜ್ಞಾನಂದ

Chess World Cup 2019: Pragnanandhaa enters historic semi-finals
Photo Credit : News Kannada

ಅಜರ್‌ಬೈಜಾನ್: ಫಿಡೆ ಚೆಸ್‌ ವಿಶ್ವಕಪ್‌ನಲ್ಲಿ 2 ದಶಕಗಳ ಬಳಿಕ ಸೆಮಿಫೈನಲ್‌ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಯುವ ಗ್ರ್ಯಾಂಡ್‌ ಮಾಸ್ಟರ್‌ ಆರ್‌.ಪ್ರಜ್ಞಾನಂದ ಪಾತ್ರರಾಗಿದ್ದಾರೆ. 2002ರಲ್ಲಿ ವಿಶ್ವನಾಥನ್ ಆನಂದ್‌ ವಿಶ್ವ ಚಾಂಪಿಯನ್‌ ಆಗಿದ್ದರು. 21 ವರ್ಷಗಳ ಬಳಿಕ 18ರ ಪ್ರಜ್ಞಾನಂದಗೆ ಆ ಅವಕಾಶ ಸಿಕ್ಕಿದೆ.

ಗುರುವಾರ ರೋಚಕ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತದವರೇ ಆದ ಗ್ರ್ಯಾಂಡ್‌ ಮಾಸ್ಟರ್‌ ಅರ್ಜುನ್‌ ಎರಿಗೈಸಿ ವಿರುದ್ಧ ಟೈ ಬ್ರೇಕರ್‌ನ ಸಡನ್‌ ಡೆತ್‌ನಲ್ಲಿ ಪ್ರಜ್ಞಾನಂದ ಗೆಲುವು ಸಾಧಿಸಿದರು. ಸೆಮಿಫೈನಲ್‌ನಲ್ಲಿ ಅವರಿಗೆ ವಿಶ್ವ ನಂ.2, ಅಮೆರಿಕದ ಫ್ಯಾಬಿಯಾನೋ ಕರುವಾನಾ ಸವಾಲು ಎದುರಾಗಲಿದೆ.

ತಮಿಳುನಾಡಿನ ಚೆನ್ನೈ ಮೂಲದವರಾದ ಪ್ರಜ್ಞಾನಂದ ಆಗಸ್ಟ್ 10, 2005ರಲ್ಲಿ ಜನಿಸಿದರು. 2016 ರಲ್ಲಿ 10 ವರ್ಷಗಳು, 10 ತಿಂಗಳುಗಳು ಮತ್ತು 19 ದಿನಗಳ ವಯಸ್ಸಿನಲ್ಲಿ ಕಿರಿಯ ಅಂತರರಾಷ್ಟ್ರೀಯ ಮಾಸ್ಟರ್ ಆಗುವ ಮೂಲಕ ವಿಶ್ವ ಮಟ್ಟದಲ್ಲಿ ದಾಖಲೆಯನ್ನು ನಿರ್ಮಿಸಿದ ಕೀರ್ತಿ ಇವರದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು