Categories: ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌: ಭಾರತದ ಕುಸ್ತಿಪಟುಗಳಿಂದ ಒಂದೇ ದಿನದಲ್ಲಿ 3 ಚಿನ್ನದ ಬೇಟೆ

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕುಸ್ತಿಪಟುಗಳು ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ. ಒಂದೇ ದಿನದಲ್ಲಿ ಮೂರು ಚಿನ್ನ ಹಾಗೂ ಒಂದು ಬೆಳ್ಳಿ ಗೆದ್ದು ಗೆಲುವಿನ ನಗೆ ಬೀರಿದರು. ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ದೀಪಕ್ ಪುನಿಯಾ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಗೆದ್ದ ಆಟಗಾರರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ.

ಫ್ರೀ ಸ್ಟೈಲ್ ಕುಸ್ತಿ 86ಕೆಜಿ ವಿಭಾಗದಲ್ಲಿ ದೀಪಕ್ ಪುನಿಯಾ ಫೈನಲ್‌ನಲ್ಲಿ ಪಾಕಿಸ್ತಾನದ ಆಟಗಾರ ಇನಾಮ್ ಪೈ ಅವರನ್ನು 3-0 ಅಂತರದಿಂದ ಸೋಲಿಸಿ ಚಿನ್ನ ಗೆದ್ದರು. ಈ ಗೆಲುವಿನೊಂದಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 9ಕ್ಕೆ ತಲುಪಿದೆ. ಒಟ್ಟು ಪದಕಗಳ ಸಂಖ್ಯೆ 25ಕ್ಕೆ ತಲುಪಿದೆ.

ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಮತ್ತು ಸ್ಟಾರ್ ಕುಸ್ತಿಪಟು ಸಾಕ್ಷಿ ಮಲಿಕ್ 62 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕೆನಡಾದ ಅನಾ ಗೊಡಿನೆಜ್ ವಿರುದ್ಧ ಗೆದ್ದರು ಚಿನ್ನ ಗೆದ್ದ ಮೂವರು ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಪುರುಷರ ಫ್ರೀಸ್ಟೈಲ್ 65 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಬಜರಂಗ್ ಪುನಿಯಾ ಕೆನಡಾದ ಲಾಚಲನ್ ಮೆಕ್‌ನೀಲ್ ಅವರನ್ನು 2-9 ಪಾಯಿಂಟ್‌ಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದರು. 2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ 28ರ ಹರೆಯದ ಸ್ಟಾರ್ ಕುಸ್ತಿಪಟು 2018ರಲ್ಲಿ ವೇಲ್ಸ್‌ನ ಕೇನ್ ಚಾರಿಗ್ ಅವರನ್ನು ಸೋಲಿಸಿ ಚಿನ್ನ ಗೆದ್ದಿದ್ದರು. ಇದೀಗ ಮತ್ತೊಂದು ಚಿನ್ನದ ಪದಕವನ್ನು ತನ್ನ ಖಾತೆಗೆ ಜಮಾ ಮಾಡಿದ್ದಾರೆ.

Sneha Gowda

Recent Posts

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

27 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

43 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

1 hour ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago